ಹುಬ್ಬಳ್ಳಿಯಲ್ಲಿ ಮುಂಜಾನೆ ಅಪಘಾತ- ಖಾಸಗಿ ಬಸ್ಸಿನಲ್ಲಿ ಬೆಂಕಿ ಮೂವರು ಸಾವು.

ಹುಬ್ಬಳ್ಳಿ -ಜು.27 – ಖಾಸಗಿ ಬಸ್ ಒಂದಕ್ಕೆ ಆಕಸ್ಮಿಕ ಬೆಂಕಿ ತಗುಲಿದ ಘಟನೆ ಹುಬ್ಬಳ್ಳಿಯ ಹೊರವಲಯದ ವರೂರು ಬಳಿ ನಡೆದಿದೆ. ಈ ದುರ್ಘಟನೆಯಲ್ಲಿ ಮೂವರು ಪ್ರಯಾಣಿಕರು ಸಜೀವ ದಹನಗೊಂಡಿದ್ದು ಹಲವಾರು ಮಂದಿ ಗಾಯಗೊಂಡಿದ್ದಾರೆ. publicಹುಬ್ಬಳ್ಳಿ ಹೊರವಲಯದ  ವರೂರು ಗ್ರಾಮದ ಮುಂಭಾಗದಲ್ಲಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಈ ದುರ್ಘಟನೆ ಸಂಭವಿಸಿದೆ. ಬೆಂಗಳೂರಿನಿಂದ ಧಾರವಾಡಕ್ಕೆ ತೆರಳುತ್ತಿದ್ದ  ಖಾಸಗಿ ಬಸ್’ನಲ್ಲಿ ಮುಂಜಾನೆ  ಆಕಸ್ಮಿಕ ಬೆಂಕಿ ತಗುಲಿದ್ದು, ಬಸ್ ಸಂಪೂರ್ಣವಾಗಿ ಬೆಂಕಿಗಾಹುತಿಯಾಗಿದೆ. 15ಕ್ಕೂ ಹೆಚ್ಚು ಮಂದಿ ಬಸ್’ನಲ್ಲಿ ಪ್ರಯಾಣಿಸುತ್ತಿದ್ದು ಮೂವರು ಸ್ಥಳದಲ್ಲೇ ಸುಟ್ಟು ಕರಕಲಾಗಿದ್ದಾರೆ.

 

Please follow and like us:
error