ಯಾವುದೇ ಕಾರಣಕ್ಕೂ ಆಪರೇಷನ್ ಕಮಲ ಮಾಡುವುದಿಲ್ಲ – ನಳಿನ್ ಕುಮಾರ್ ಕಟೀಲ್

 ಹುಬ್ಬಳ್ಳಿ ,  : ತಮ್ಮ ಪಕ್ಷದ ಶಾಸಕರನ್ನು ಹಿಡಿದಿಟ್ಟುಕೊಳ್ಳಲು ಕಾಂಗ್ರೆಸ್‌ನವರಿಗೆ ಸಾಧ್ಯವಾಗದಿದ್ದರೆ ನಾವೇನು ಮಾಡಬೇಕು ಎಂದು ಪ್ರಶ್ನಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ , ನಾವು ಯಾವುದೇ ಕಾರಣಕ್ಕೂ ಆಪರೇಷನ್ ಕಮಲ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ . ರವಿವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು , 
ನಮ್ಮದು ರಾಜಕೀಯ ಪಕ್ಷ , ಪಕ್ಷದ ತತ್ವ , ಸಿದ್ದಾಂತವನ್ನು ಒಪ್ಪಿಬರುವ ಎಲ್ಲರನ್ನು ಸ್ವಾಗತಿಸುತ್ತದೆ . ಕಾಂಗ್ರೆಸ್ ಅಥವಾ ಜೆಡಿಎಸ್ ಪಕ್ಷದಿಂದ ಯಾರೇ ಬಂದರೂ ಅವರನ್ನು ನಾವು ಬೇಡ ಎನ್ನುವುದಿಲ್ಲ ಎಂದರು . ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಮೊದಲು ತಮ್ಮ ಪಕ್ಷದ ಶಾಸಕರ ವಿಶ್ವಾಸ ಉಳಿಸಿಕೊಳ್ಳುವ ಕೆಲಸ ಮಾಡಬೇಕು . ಅದನ್ನು ಬಿಟ್ಟು ಬಿಜೆಪಿಯನ್ನು ದೂರುವ ಕೆಲಸ ಸರಿಯಲ್ಲ ಎಂದು ಆಕ್ಷೇಪಿಸಿದ ನಳಿನ್ ಕುಮಾರ್ ಕಟೀಲ್ , ಆ ಪಕ್ಷದ ಶಾಸಕರೇ ಬಂದರೆ ನಾವೇನು ಮಾಡಬೇಕು ಎಂದು ಕೇಳಿದರು . 15 ಸ್ಥಾನಗಳಲ್ಲಿ ಗೆಲುವು : ಉಪಚುನಾವಣೆಗೆ ಪ್ರಚಾರಕ್ಕೆ ಹೋದಲೆಲ್ಲ ನಮ್ಮ ಪಕ್ಷಕ್ಕೆ ಉತ್ತಮ ಬೆಂಬಲ ವ್ಯಕ್ತವಾಗಿದೆ . ಜನರಲ್ಲಿಯೂ ಬಿಜೆಪಿ ಅಲೆಯಿದ್ದು , 15 ಸ್ಥಾನಗಳಲ್ಲಿ ನಮ್ಮ ಪಕ್ಷದ ಅಭ್ಯರ್ಥಿಗಳೇ ಗೆಲುವು ಸಾಧಿಸಲಿದ್ದಾರೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು . ಹದಿನೇಳು ಮಂದಿ ಅನರ್ಹ ಶಾಸಕರು ರಾಜೀನಾಮೆ ಕೊಟ್ಟಿದ್ದರಿಂದ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಿದೆ . ಅವರಿಗೂ ನಾಯ ಕೊಡುತೇವೆ . ಕಲ್ಯಾಣ ಕರ್ನಾಟಕ ಭಾಗದ ಶಾಸಕರಲ್ಲಿ ಯಾರಲ್ಲಿಯೂ ಅಸಮಾಧಾನವಿಲ್ಲ ಎಂದು ನಳಿನ್ ಕುಮಾರ್ ಕಟೀಲ್ ತಿಳಿಸಿದರು .

Please follow and like us:
error