ರೈತರನ್ನು ಹೇಡಿಗಳು ಎಂದಿರುವ ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿಕೆಗೆ ವಿರೋಧ ಪಕ್ಷಗಳು ಭಾರಿ ಆಕ್ರೋಶ ವ್ಯಕ್ತಪಡಿಸಿವೆ. ರಾಜ್ಯ ಕಾಂಗ್ರೆಸ್ ಪಕ್ಷವು ತನ್ನ ಟ್ವಿಟರ್ ಖಾತೆಯಲ್ಲಿ ಸರಣಿ ಟ್ವೀಟ್ಗಳನ್ನು ಮಾಡಿ, ಹೇಡಿಗಳು ರೈತರೋ ಅಥವಾ ನಿಮ್ಮ ಸರ್ಕಾರ, ಸಂಸದರೋ ಎಂದು ಪ್ರಶ್ನಿಸಿದ್ದಾರೆ.

ಕೊಡಗಿನ ಕೃಷಿ ಕಾಲೇಜಿನಲ್ಲಿ ಬಿದಿರು ಸಂಪನ್ಮೂಲ ಕೇಂದ್ರ ಉದ್ಘಾಟನಾ ಕಾರ್ಯಕ್ರಮದಲ್ಲಿ ಕೃಷಿ ಸಚಿವ ಬಿ.ಸಿ. ಪಾಟೀಲ್, ಸಾಲ ಮತ್ತಿತರ ಸಮಸ್ಯೆಗಳಿಗೆ ಹೆದರಿ ಆತ್ಮಹತ್ಯೆ ಮಾಡಿಕೊಳ್ಳುವ ರೈತರು ಹೇಡಿಗಳು ಎಂದಿದ್ದರು.
ಉತ್ತರಿಸಿ ಬಿ ಸಿ ಪಾಟೀಲ್ ಅವರೇ
ನಿಜವಾದ ಹೇಡಿಗಳು ಯಾರು
ರೈತರೋ? ಅಥವಾ…
- ರಾತ್ರೋರಾತ್ರಿ ಮುಂಬೈಗೆ ಹಾರಿದವರೋ?
- ಕೊರೋನಾ ಸಮಯದಲ್ಲಿ ರೈತರ ಬೆಳೆಗೆ ಮಾರುಕಟ್ಟೆ ಕಲ್ಪಿಸದ ಸರ್ಕಾರವೋ?
- ಕೇಂದ್ರದಿಂದ ರಾಜ್ಯಕ್ಕೆ ಬರಬೇಕಾದ ಜಿಎಸ್ಟಿ ಪಾಲು ಕೇಳದವರೋ?
- ನೆರೆ ಬಂದಾಗ ಸಂತ್ರಸ್ತರ ನೆರವಿಗೆ ನಿಲ್ಲದ ಬಿಜೆಪಿ ನಾಯಕರೋ?
- ಪರಿಹಾರ ಕೇಳಿದ್ದಕ್ಕೆ ರೈತನ ಮೇಲೆ ಸುಳ್ಳು ಪ್ರಕರಣ ದಾಖಲಿಸಿರುವವರೋ?
- ರಾಜ್ಯದ ಸಮಸ್ಯೆ ಬಗ್ಗೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕದ ಬಿಜೆಪಿ ಸಂಸದರೋ?
ಕೃಷಿ ಸಚಿವರ ಹೇಳಿಕೆಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕುಡ ಆಕ್ರೋಶ ವ್ಯಕ್ತಪಡಿಸಿದ್ದು, ಬಹಿರಂಗವಾಗಿ ರೈತ ಸಮುದಾಯದ ಕ್ಷಮೆ ಕೂರಲು ಆಗ್ರಹಿಸಿದ್ದಾರೆ.
ಕಾಂಗ್ರೆಸ್ ಪಕ್ಷ, ರೈತರ ಮೇಲೆ ಗುಂಡು ಹಾರಿಸಿ ಗೋಲಿಬಾರ್ ಮಾಡುವ, ಲಾಠಿ ಚಾರ್ಜ್ ಮಾಡುವ, ಕರಾಳ ಕಾಯ್ದೆಗಳ ಮೂಲಕ ರೈತರ ಬದುಕಿಗೆ ಕೊಳ್ಳಿ ಇಡುತ್ತಿರುವ ಬಿಜೆಪಿಗರು ದೊಡ್ಡ ಶೂರರೇ ಎಂದು ಬಿ.ಸಿ.ಪಾಟೀಲ್ ಅವರನ್ನು ಪ್ರಶ್ನಿಸಿದೆ.