ಹೈಕೋರ್ಟ ಮುಖ್ಯ‌ ನ್ಯಾಯಾಧಿಶರಿಗೆ ಯುವತಿ ಪ್ರಾಣ ಭಯ ಪತ್ರ : ಸರ್ಕಾರ ಅಸ್ತಿತ್ವದಲ್ಲಿದೆಯೆ? ಸಿದ್ದರಾಮಯ್ಯ ಆಕ್ರೋಶ

ಬೆಂಗಳೂರು : ಸಿಡಿ ಹಗರಣದ ಯುವತಿ ತನಗೆ ಪ್ರಾಣ ಭಯ ಇದೆ ಎಂದು ರಾಜ್ಯದ ಹೈಕೋರ್ಟ್ ಮುಖ್ಯನ್ಯಾಯಾಧೀಶರಿಗೆ ಬರೆದಿದ್ದಾರೆನ್ನಲಾದ ಪತ್ರ ಗಾಬರಿ ಹುಟ್ಟಿಸುವಂತಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರೇ ರಾಜ್ಯದಲ್ಲಿ ನಿಮ್ಮ ಸರ್ಕಾರ ಅಸ್ತಿತ್ವದಲ್ಲಿದೆಯೇ? ಎಂದು ವಿಪಕ್ಷ ನಾಯಕ ಮಾಜಿ ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು

ಸಂತ್ರಸ್ಥ ಯುವತಿ ಪ್ರಾರಂಭದ ಆಡಿಯೋದಲ್ಲಿ ಆತ್ಮಹತ್ಯೆಗೆ ಪ್ರಯತ್ನ ಮಾಡಿದ್ದೆ ಎಂದು ಹೇಳಿದ್ದಳು, ಈಗ ತನಗೆ ಪ್ರಾಣಭಯ ಇದೆ ಎಂದು ಪತ್ರ ಬರೆದಿದ್ದಾಳೆ. ಆ ಸಂತ್ರಸ್ತ ಯುವತಿಯ ಪ್ರಾಣಕ್ಕೇನಾದರೂ ಅಪಾಯ ಎದುರಾದರೆ ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಗೃಹಸಚಿವ ಬಸವರಾಜ ಬೊಮ್ಮಾಯಿ ಮತ್ತು ಇಡೀ ಬಿಜೆಪಿ ಸರ್ಕಾರವೇ ಹೊಣೆಯಾಗುತ್ತದೆ.

ಹೈಕೋರ್ಟ್ ಮುಖ್ಯನ್ಯಾಯಾಧೀಶರಿಗೆ ಸಂತ್ರಸ್ಥೆ ಯುವತಿ ಬರೆದ ಪತ್ರದಲ್ಲಿ ಎಸ್ ಐಟಿ ಮೇಲೆಯೇ ಅಪನಂಬಿಕೆ ವ್ಯಕ್ತಪಡಿಸಿರುವುದು ಮಾತ್ರವಲ್ಲ, ಅವರು ಸಾಕ್ಷ್ಯನಾಶ ಮಾಡುತ್ತಿದ್ದಾರೆ, ತನ್ನ ವಿರೋಧಿಗಳ ಜೊತೆ ಷಾಮೀಲಾಗಿದ್ದಾರೆ ಎಂದೆಲ್ಲ ಆರೋಪಿಸಿರುವುದು ಗಂಭೀರವಾದ ವಿಷಯ.

ಸಂತ್ರಸ್ಥ ಯುವತಿ ನಿರಂತರವಾಗಿ ವಿಡಿಯೋ, ಪತ್ರಗಳನ್ನು ಬಿಡುಗಡೆ ಮಾಡುತ್ತಿದ್ದರೆ, ರಾಜ್ಯದ ಮುಖ್ಯಮಂತ್ರಿಗಳು, ಗೃಹಸಚಿವರು ಮತ್ತು ಪೊಲೀಸರು ನಿರಂತರವಾಗಿ ಸಭೆ ನಡೆಸುತ್ತಿದ್ದಾರೆ. ಫಲಿತಾಂಶ ಏನು?

ಸಿಡಿ ಬಹಿರಂಗಗೊಂಡು 27 ದಿನಗಳು ಕಳೆದರೂ ಹಗರಣದ ಕೇಂದ್ರವ್ಯಕ್ತಿಯಾದ ಸಂತ್ರಸ್ತ ಯುವತಿಯ ವಿಚಾರಣೆ ನಡೆಸಲು ಸಾಧ್ಯವಾಗದ ಪೊಲೀಸರ ವೈಫಲ್ಯಕ್ಕೆ ಯಾರು ಹೊಣೆ? ಅವರ ಮೇಲೆ ಪ್ರಭಾವ ಬೀರುತ್ತಿರುವವರು ಯಾರು?
ರಾಜ್ಯದಲ್ಲಿ ಕಾನೂನು ವ್ಯವಸ್ಥೆ ಕುಸಿದು ಬಿದ್ದಿರುವುದಕ್ಕೆ ಬೇರೆ ಸಾಕ್ಷಿ ಬೇಕೇ? ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Jarkiholi_CDcase

Please follow and like us:
error