1ರಿಂದ 8 ನೇ ತರಗತಿ ವರೆಗೆ ಶಾಲೆ ಆರಂಭ ಇಲ್ಲ : ಸುರೇಶ್ ಕುಮಾರ್

kannadanet News 1 ರಿಂದ 8 ನೇ ತರಗತಿಯ ವರೆಗೆ ಶೈಕ್ಷಣಿಕ ವರ್ಷ ಪ್ರಾರಂಭಿಸದಿರಲು ರಾಜ್ಯ ಸರಕಾರ ನಿರ್ಧರಿಸಿದೆ .

2020- 21 ನೇ ಶೈಕ್ಷಣಿಕ ಸಾಲಿನಲ್ಲಿ ಶಾಲೆಗಳನ್ನು ಪ್ರಾರಂಭಿಸುವ ಬಗ್ಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಭೆಯಲ್ಲಿ ಈ ಬಗ್ಗೆ ನಿರ್ಧರಿಸಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ತಿಳಿಸಿದ್ದಾರೆ . ಎಸೆಸೆಲ್ಸಿ ಮತ್ತು ಪಿಯು ತರಗತಿಗಳನ್ನು ಪ್ರಾರಂಭಿಸುವ ಬಗ್ಗೆ ಡಿಸೆಂಬರ್ ಅಂತ್ಯದಲ್ಲಿ ಪರಿಸ್ಥಿತಿಯನ್ನು ಅವಲೋಕಿಸಿ ತೀರ್ಮಾನ ಕೈಗೊಳ್ಳಲು ಸಭೆಯಲ್ಲಿ ನಿರ್ಧರಿಸಲಾಯಿತು ಎಂದು ಅವರು ಮಾಹಿತಿ ನೀಡಿದರು . ಇಂದು ನಡೆದ ಸಭೆಯಲ್ಲಿ ಮುಖ್ಯಮಂತ್ರಿ ಅಲ್ಲದೆ , ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ , ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್ , ಆರೋಗ್ಯ ಮತ್ತು ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು . ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಆನ್ ಲೈನ್ ಮೂಲಕ ಸಭೆಯಲ್ಲಿ ಪಾಲ್ಗೊಂಡರು .

Please follow and like us:
error