4 & 5 ರಂದು ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ, ಸಾಂಸ್ಕೃತಿಕ ಕಾರ್ಯಕ್ರಮ


ಕೊಪ್ಪಳ, : ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಜಿಲ್ಲಾ ಶಾಖೆ ಕೊಪ್ಪಳ ಇವರ ಸಹಯೋಗದಲ್ಲಿ “ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳ”ನ್ನು ಫೆಬ್ರವರಿ. 04 ಮತ್ತು 05 ರಂದು ಹಮ್ಮಿಕೊಳ್ಳಲಾಗಿದ್ದು, ಉದ್ಘಾಟನಾ ಸಮಾರಂಭ ಫೆ. 04 ರಂದು ಬೆಳಿಗ್ಗೆ 10-30 ಗಂಟೆಗೆ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ.
 ಕರ್ನಾಟಕ ಸರ್ಕಾರದ ಕೃಷಿ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ.ಪಾಟೀಲ್ ಅವರು ಕಾರ್ಯಕ್ರಮದ ಉದ್ಘಾಟನೆ ನೆರವೇರಿಸುವರು. ಶಾಸಕ ಕೆ.ರಾಘವೇಂದ್ರ ಹಿಟ್ನಾಳ ಸಮಾರಂಭದ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಜಿಲ್ಲಾ ಪಂಚಾಯತಿ ಅಧ್ಯಕ್ಷ ಕೆ.ರಾಜಶೇಖರ್ ಹಿಟ್ನಾಳ, ಸಂಸದ ಕರಡಿ ಸಂಗಣ್ಣ, ಶಾಸಕರುಗಳಾದ ಅಮರೇಗೌಡ ಎಲ್. ಪಾಟೀಲ್ ಬಯ್ಯಾಪೂರ, ಪರಣ್ಣ ಈಶ್ವರಪ್ಪ ಮುನವಳ್ಳಿ, ಹಾಲಪ್ಪ ಬಸಪ್ಪ ಆಚಾರ್ ಹಾಗೂ ಬಸವರಾಜ ದಢೇಸೂಗೂರು, ವಿಧಾನ ಪರಿಷತ್ ಸದಸ್ಯರುಗಳಾದ ಶಶೀಲ್ ಜಿ. ನಮೋಶಿ, ಬಸವರಾಜ ಪಾಟೀಲ್ ಇಟಗಿ ಹಾಗೂ ಡಾ. ಚಂದ್ರಶೇಖರ್ ಬಿ.ಪಾಟೀಲ್, ಮುನಿರಾಬಾದ್ ಕಾಡಾ ಅಧ್ಯಕ್ಷ ತಿಪ್ಪೇರುದ್ರಸ್ವಾಮಿ ಬಿ.ಹೆಚ್.ಎಮ್., ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಅಧ್ಯಕ್ಷ ಶರಣು ಭೀಮಣ್ಣ ತಳ್ಳಿಕೇರಿ, ಜಿ.ಪಂ. ಉಪಾಧ್ಯಕ್ಷೆ ಬೀನಾ ಗೌಸ್, ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷೆ ಭಾಗ್ಯವತಿ ಮಾಣಿಕ ಬೋಲಾ, ತಾ.ಪಂ. ಅಧ್ಯಕ್ಷ ಬಾಲಚಂದ್ರನ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಹಾಂತೇಶ ಎಸ್. ಪಾಟೀಲ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸರ್ಕಾರದ ಕಾರ್ಯದರ್ಶಿಗಳು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಶ್ಮೀ ವಿ.ಮಹೇಶ, ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಘುನಂದನ್ ಮೂರ್ತಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಟಿ.ಶ್ರೀಧರ, ಕ.ರಾ. ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ನಾಗರಾಜ ಆರ್. ಜುಮ್ಮನ್ನವರ ಪಾಲ್ಗೊಳ್ಳುವರು.
ಸಮಾರೋಪ ಸಮಾರಂಭ ಹಾಗೂ ಬಹುಮಾನ ವಿತರಣೆ;
 ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು 2020-21ರ ನಿಮಿತ್ತ ಸಮಾರೋಪ ಸಮಾರಂಭ ಹಾಗೂ ಬಹುಮಾನ ವಿತರಣೆ ಕಾರ್ಯಕ್ರಮವನ್ನು ಫೆ. 05 ರಂದು ಸಂಜೆ 06 ಗಂಟೆಗೆ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ. ಅಪರ ಜಿಲ್ಲಾಧಿಕಾರಿ ಎಂ.ಪಿ. ಮಾರುತಿ ಅವರು ಬಹುಮಾನ ವಿತರಿಸುವರು. ಕ.ರಾ. ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ನಾಗರಾಜ ಆರ್. ಜುಮ್ಮನ್ನವರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.
 ಮುಖ್ಯ ಅತಿಥಿಗಳಾಗಿ ಸಹಾಯಕ ಆಯುಕ್ತ ನಾರಾಯಣರೆಡ್ಡಿ, ಜಿಪಂ ಉಪಕಾರ್ಯದರ್ಶಿ ಶರಣಬಸವರಾಜ, ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ ಉಪನಿರ್ದೇಶಕರಾದ ಶಾಂತಗೌಡ ಜಿ. ಗುಣಕಿ, ಕೊಪ್ಪಳ ತಹಶೀಲ್ದಾರ್ ಜೆ.ಬಿ.ಮಜ್ಜಗಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಅಲಕನಂದಾ ಮಳಗಿ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ದೊಡ್ಡಬಸಪ್ಪ ನೀರಲಕೇರಿ, ಲೋಕೋಪಯೋಗಿ ಇಲಾಖೆ ಕಾರ್ಯನಿರ್ವಾಹಕ ಅಭಿಯಂತರರಾದ ತಿರುಮಲರಾವ್ ಕುಲಕರ್ಣಿ, ಪ್ರಾದೇಶಿಕ ಸಾರಿಗೆ ಅಧಿಕಾರಿ ಲಕ್ಷಿö್ಮಕಾಂತ್ ನಾಲ್ವಾರ, ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಹಿರಿಯ ಭೂ ವಿಜ್ಞಾನಿ ಮುತ್ತಪ್ಪ ಪಿ., ಜಿಲ್ಲಾ ಖಜಾನೆ ಅಧಿಕಾರಿ ಎಂ.ಮೆಹಬೂಬಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರಾದ ಅಮೃತ ಅಷ್ಟಗಿ, ಕ್ಷೇತ್ರ ಶಿಕ್ಷಣಾಧಿಕಾರಿ ಉಮಾದೇವಿ ಸೊನ್ನದ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರಾದ ಸಿದ್ಧಲಿಂಗೇಶ ಕೆ.ರಂಗಣ್ಣವರ ಭಾಗವಹಿಸುವರು. ಕ.ರಾ.ಪ್ರಾ.ಶಾ.ಶಿ. ಸಂಘದ ರಾಜ್ಯಾಧ್ಯಕ್ಷ ಶಂಭುಲಿAಗನಗೌಡ ಪಾಟೀಲ್ ಹಾಗೂ ಹಲವು ಗಣ್ಯರು, ಅಧಿಕಾರಿಗಳು ಗೌರವ ಉಪಸ್ಥಿತಿ ವಹಿಸುವರು 

Please follow and like us:
error