7 ನೇ ತರಗತಿಯವರೆಗೆ ಆನ್‌ಲೈನ್‌ ಕ್ಲಾಸ್‌ ರದ್ದು: ಸಚಿವ ಸಂಪುಟ ತೀರ್ಮಾನ

ಎಲ್‍ಕೆಜಿ, ಯುಕೆಜಿ ಸೇರಿದಂತೆ ಏಳನೆ ತರಗತಿಯವರೆಗೆ ಆನ್‌ಲೈನ್‌ ಕ್ಲಾಸ್ ನಡೆಸದಿರಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಮುಖ್ಯಮಂತ್ರಿ ಯಡಿಯೂರಪ್ಪನವರ ಅಧ್ಯಕ್ಷತೆಯಲ್ಲಿ ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.

ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾನೂನು ಮತ್ತು ಸಂಸದೀಯ ವ್ಯವಹಾರ ಖಾತೆ ಸಚಿವ ಜೆ.ಸಿ.ಮಾಧುಸ್ವಾಮಿ ಒಂದರಿಂದ 7ನೆ ತರಗತಿಯ ವರೆಗೆ ಆನ್‍ಲೈನ್ ಕ್ಲಾಸ್ ನಡೆಯುವುದಿಲ್ಲ, ಈ ಬಗ್ಗೆ ಶೀಘ್ರವೇ ಶಿಕ್ಷಣ ಇಲಾಖೆ ಆದೇಶ ಹೊರಡಿಸಲಿದೆ ಎಂದರು.

ಈ ಹಿಂದೆ ಎಲ್‍ಕೆಜಿಯಿಂದ ಐದನೆ ತರಗತಿಯ ವರೆಗೆ ಆನ್‍ಲೈನ್ ಕ್ಲಾಸ್ ನಡೆಸಬಾರದು ಎಂದು ನಿರ್ಧರಿಸಲಾಗಿತ್ತು. ಈಗ ಅದನ್ನು ಏಳನೆ ತರಗತಿಯವರೆಗೆ ವಿಸ್ತರಿಸಲು ಶಿಕ್ಷಣ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿ, ಸಚಿವ ಸಂಪುಟ ಸಭೆ ಈ ನಿರ್ಧಾರಕ್ಕೆ ಬಂದಿದೆ ಎಂದು ಮಾಧುಸ್ವಾಮಿ ಹೇಳಿದ್ದಾರೆ.

ಎಸ್ಸೆಸ್ಸೆಲ್ಸಿ ಪರೀಕ್ಷೆಗಳ ಬಗ್ಗೆ ಸ್ಪಷ್ಟನೆ ನೀಡಿದ ಅವರು, ಈ ಪರೀಕ್ಷಗಳ ದಿನಾಂಕಗಳು ಯಾವುದೆ ಕಾರಣಕ್ಕೂ ಬದಲಾಗುವುದಿಲ್ಲ, ಅದು ನಿಗದಿಯಂತೆ ನಡೆಯುತ್ತದೆ ಎಂದು ಹೇಳಿದರು.

Please follow and like us:
error