7.5% ಮೀಸಲಾತಿ ನೀಡದಿದ್ದರೆ ರಾಜ್ಯಾದ್ಯಂತ ಹೋರಾಟ

ವಾಲ್ಮೀಕಿ ನಾಯಕ ಸಮುದಾಯಕ್ಕೆ ಮೀಸಲಾತಿ ನೀಡದಿದ್ದರೆ ರಾಜ್ಯಾದ್ಯಂತ ಹೋರಾಟ

ಕೊಪ್ಪಳ: ಸೆಪ್ಟೆಂಬರ್ 21ರಂದು ನಡೆಯುವ ಅಧಿವೇಶನದಲ್ಲಿ ವಾಲ್ಮೀಕಿ ನಾಯಕ ಸಮುದಾಯಕ್ಕೆ ಶೇಕಡಾ 7.5ರಷ್ಟು ಮೀಸಲಾತಿ ನೀಡದಿದ್ದರೆ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸಲಾಗುವುದು ಎಂದು ಅಖಿಲ ಕರ್ನಾಟಕ ವಾಲ್ಮೀಕಿ ಮಹಾಸಭಾದ ರಾಜ್ಯ ಸಂಘಟನಾ ಕಾರ್ಯದರ್ಶಿ ಸುರೇಶ್ ದೊಣ್ಣಿ ಹೇಳಿದರು.

ಕೊಪ್ಪಳ ಪತ್ರಿಕಾ ಭವನದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ಮೀಸಲಾತಿಗಾಗಿ ಸಮುದಾಯವು ಹಲವು ವರ್ಷಗಳಿಂದ ಹೋರಾಡುತ್ತಾ ಬಂದರೂ ಬೇಡಿಕೆ ಈಡೇರಿಲ್ಲ. ನ್ಯಾಯಮೂರ್ತಿ ನಾಗಮೋಹನ್‌ದಾಸ್ ಅವರು ಮೀಸಲಾತಿ ಕಲ್ಪಿಸಲು ಸಮ್ಮತಿಸಿ ವರದಿ ನೀಡಿ, 2-3 ತಿಂಗಳು ಗತಿಸಿದರೂ ಸರಕಾರ ಗಮನ ಹರಿಸುತ್ತಿಲ್ಲ. ಹಾಗಾಗಿ ಸೆಪ್ಟೆಂಬರ್ 21ರೊಳಗಾಗಿ ಮೀಸಲಾತಿ ಕಲ್ಪಿಸದಿದ್ದರೆ ರಾಜನಹಳ್ಳಿ ಗುರುಪೀಠದ ಶ್ರೀ ಪ್ರಸನ್ನಾನಂದಪುರಿ ಮಹಾಸ್ವಾಮಿಗಳ ನೇತೃತ್ವದಲ್ಲಿ ವಿಧಾನಸೌಧ ಮುತ್ತಿಗೆ ಚಳವಳಿ ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ ಎಂದು ಅವರು ತಿಳಿಸಿದರು.

ಈ ಸಂದರ್ಭದಲ್ಲಿ ಸಮುದಾಯದ ಮುಖಂಡರಾದ ಶರಣಪ್ಪ ನಾಯಕ್, ವಿಜಯೇಂದ್ರ ಬಿಸರಳ್ಳಿ, ರುಕ್ಕಣ್ಣ ಸ್ಯಾವಿ, ಮಲ್ಲಪ್ಪ ಬೇಲೇರಿ ಮತ್ತಿತರರು ಇದ್ದರು.

Please follow and like us:
error