BSPಯ ಶಾಸಕರನ್ನು ಕಾಂಗ್ರೆಸ್ ಸೆಳೆದಿಲ್ಲವೇ? ಇದು ಖರೀದಿಯಲ್ಲವೇ?- ಹೆಚ್ಡಿಕೆ ವ್ಯಂಗ್ಯ

ಬೆಂಗಳೂರು : ಶಾಸಕರನ್ನು ಖರೀದಿಸಿ, ಸರ್ಕಾರಗಳನ್ನು ಉರುಳಿಸುತ್ತಿರುವ ಬಿಜೆಪಿ ವಿರುದ್ಧ ಕಾಂಗ್ರೆಸ್ ದೇಶಾದ್ಯಂತ “ಪ್ರಜಾಪ್ರಭುತ್ವ ಉಳಿಸಿ” ಎಂದು ಹೋರಾಟ ನಡೆಸುತ್ತಿದೆ. ಇದೇ ಕಾಂಗ್ರೆಸ್ ರಾಜಸ್ಥಾನದಲ್ಲಿ ಏನು ಮಾಡಿದೆ? ಸರ್ಕಾರ ರಚಿಸಲು ಬೆಂಬಲ ನೀಡಿದ BSPಯ ಎಲ್ಲ ಶಾಸಕರನ್ನೂ ಕಾಂಗ್ರೆಸ್ ಸೆಳೆದಿಲ್ಲವೇ? ಇದು ಖರೀದಿಯಲ್ಲವೇ? ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ

ಪಕ್ಷಾಂತರ ನಿಷೇಧ ಕಾಯ್ದೆ ಪರಿಣಾಮಕಾರಿಯಾಗಿಲ್ಲ.‌ಆದ್ದರಿಂದಲೇ ಈ ಪ್ರಜಾಪ್ರಭುತ್ವ ವಿರೋಧಿ ಪ್ರಹಸನಗಳು ನಡೆಯುತ್ತಿವೆ. ಹಾಗಾಗಿ ಪಕ್ಷಾಂತರ ಮಾಡಿದ ವ್ಯಕ್ತಿ, ಆತನ ಕುಟುಂಬಕ್ಕೆ 2 ಅವಧಿಗೆ ಚುನಾವಣೆ ನಿರ್ಬಂಧಿಸುವ ಮತ್ತು ಈ ಅವಧಿಯಲ್ಲಿ ಯಾವುದೇ ಅಧಿಕಾರ ಹೊಂದದಂತೆ ಮಾಡುವುದು ಸೂಕ್ತ.ಇದರತ್ತ ಚರ್ಚೆಗಳಾದರೂ ನಡೆಯಲಿ.ಪ್ರಜಾಪ್ರಭುತ್ವ ಉಳಿಯಲಿ.

ಪ್ರಜಾಪ್ರಭುತ್ವ ಉಳಿಸಲು ಪ್ರಾಣ ನೀಡುವುದಾಗಿ ಕಾಂಗ್ರೆಸ್‌ ಪ್ರತಿಭಟನೆಯಲ್ಲಿ ಮಾಜಿ ಸಿಎಂ ಹೇಳುತ್ತಿದ್ದರು.ಸ್ವಾಮಿ,ಜೀವ ಅಮೂಲ್ಯ.ನೀವು ಪ್ರಾಣ ಕೊಡುವುದು ಬೇಡ.ಕಾಂಗ್ರೆಸ್‌ ನಡೆದು ಬಂದ ದಾರಿಯನ್ನು ಒಂದು ಬಾರಿ ನೆನಪಿಸಿಕೊಳ್ಳಿ.ನಂತರ ಪಕ್ಷಾಂತರ ನಿಷೇಧ ಕಾಯ್ದೆಯನ್ನು ಸದೃಢಗೊಳಿಸುವತ್ತ ಚಿಂತನೆ ಮಾಡಿ.ಪ್ರಜಾಪ್ರಭುತ್ವ ತಂತಾನೆ ಉಳಿಯುತ್ತದೆ ಎಂದು ಟ್ವೀಟ್ ಮಾಡಿದ್ದಾರೆ

Please follow and like us:
error