BSY ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಲಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಒತ್ತಾಯ

ರಾಯಚೂರು , ನ . 13 : ಶಾಸಕರ ಅನರ್ಹತೆಗೆ ಸಂಬಂಧಿಸಿ ಸ್ಪೀಕರ್‌ ಆದೇಶವನ್ನು ಸುಪ್ರೀಂಕೋರ್ಟು ಎತ್ತಿ 

ಹಿಡಿದಿರುವುದರಿಂದ ಮುಖ್ಯಮಂತ್ರಿ ಬಿ . ಎಸ್ . ಯಡಿಯೂರಪ್ಪ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಲಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಒತ್ತಾಯಿಸಿದ್ದಾರೆ . ರಾಯಚೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು , ಸುಪ್ರೀಂಕೋರ್ಟು ಸ್ಪೀಕರ್‌ ಆದೇಶ ಎತ್ತಿ ಹಿಡಿದಿದ್ದು , ನೈತಿಕತೆಗೆ ಗೆಲುವು . ತೀರ್ಪನ್ನು ಕಾಂಗ್ರೆಸ್ ಪಕ್ಷ ಸ್ವಾಗತಿಸುತ್ತದೆ ಎಂದರು . ಸುಪ್ರೀಂ ಕೋರ್ಟ್ ತೀರ್ಪಿನ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ಸರಕಾರಕ್ಕೆ ಅಧಿಕಾರದಲ್ಲಿ ಉಳಿಯುವ ನೈತಿಕತೆಯಿಲ್ಲ . ಸ್ಪೀಕರ್ ನಿರ್ಧಾರ ಸರಿ ಎಂಬುದನ್ನು ತೀರ್ಪು ಬಯಲುಗೊಳಿಸಿದೆ . ಕುದುರೆ ವ್ಯಾಪಾರ ನಡೆದಿರುವುದು ಸಾಬೀತಾಗಿದೆ . ಶೀಘ್ರ ರಾಷ್ಟ್ರಪತಿ ಭೇಟಿ ಮಾಡಿ ರಾಜ್ಯ ಸರಕಾರದ ವಿರುದ್ಧ ದೂರು ನೀಡಲಾಗುವುದು . ಸರಕಾರವನ್ನು ವಜಾಗೊಳಿಸಲು ಒತ್ತಾಯ ಮಾಡಲು ನಿರ್ಧರಿಸಲಾಗಿದೆ ಎಂದರು . ಬಿಜೆಪಿಗೆ ನೈತಿಕತೆಯಿದ್ದರೆ ಉಪ ಚುನಾವಣೆಯಲ್ಲಿ ಅನರ್ಹ ಶಾಸಕರಿಗೆ ಸ್ಪರ್ಧೆಗೆ ಅವಕಾಶ ನೀಡಬಾರದು ಎಂದವರು ಒತ್ತಾಯಿಸಿದರು . 

Please follow and like us:
error