fbpx

SSLC ಪರೀಕ್ಷೆ ಜೂನ್ 25 ರಿಂದ ಜುಲೈ 4, PUC ಜೂನ್ ೧೮ಕ್ಕೆ

ಬೆಂಗಳೂರು : ಎಸೆಸೆಲ್ಸಿ ಪರೀಕ್ಷೆ ಜೂನ್ 25 ರಿಂದ ಜುಲೈ 4 ರ ವರೆಗೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್ . ಸುರೇಶ್ ಕುಮಾರ್ ಅವರು ತಿಳಿಸಿದ್ದಾರೆ . ಜೂನ್ 18 ರಂದು ದ್ವಿತೀಯ ಪಿಯು ಇಂಗ್ಲಿಷ್ ಪರೀಕ್ಷೆ ನಡೆಯಲಿದೆ ಎಂದೂ ಅವರು ಹೇಳಿದರು . ವಿಧಾನಸೌಧದಲ್ಲಿ ಸೋಮವಾರ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು 2,879 ಪರೀಕ್ಷಾ ಕೇಂದ್ರಗಳಲ್ಲಿ 43,720 ಕೊಠಡಿಗಳನ್ನು ಬಳಸಲಾಗುತ್ತಿದೆ . ಪ್ರತಿ ಕೊಠಡಿಯಲ್ಲಿ ಸುರಕ್ಷಿತ ಅಂತರ ಕಾಯ್ದುಕೊಂಡು ಆಸನದ ವ್ಯವಸ್ಥೆ ಮಾಡಲಾಗುವುದು ಎಂದರು . 8,48,196 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ , ಭಾರತ್ ಸೌಟ್ಸ್ , ರಾಮಕೃಷ್ಣ ಮಿಶನ್ ಅವರು ಮಾಸ್ಕ್ ನೀಡಲಿದ್ದಾರೆ . ಎಲ್ಲಾ ಕೇಂದ್ರಗಳು ಸ್ಯಾನಿಟೈಸರ್ ಬಳಸಲಾಗುವುದು . ಜ್ವರದ ಲಕ್ಷಣ ಇರುವ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕೊಠಡಿಯ ವ್ಯವಸ್ಥೆ ಮಾಡಲಾಗುವುದು . ಸಮಾಜ ಕಲ್ಯಾಣ ಶಾಲೆಗಳನ್ನು ಕ್ವಾರಂಟೈನ್ ಮಾಡಿದ್ದರಿಂದ ಅಂತಹ ಪರೀಕ್ಷಾ ಕೇಂದ್ರಗಳ ವಿದ್ಯಾರ್ಥಿಗಳಿಗೆ ಸಮೀಪದ ಪರೀಕ್ಷಾ ಕೇಂದ್ರಗಳಲ್ಲಿ ವ್ಯವಸ್ಥೆ ಮಾಡಲಾಗುವುದು ಎಂದು ಅವರು ಈ ಸಂದರ್ಭ ಹೇಳಿದರು .

Please follow and like us:
error
error: Content is protected !!