You are here
Home > ಈ ಕ್ಷಣದ ಸುದ್ದಿ > ಅದ್ಧೂರಿ ಕನ್ನಡ ರಾಜ್ಯೋತ್ಸವ ಆಚರಣೆಗೆ ನಿರ್ಧಾರ : ಡಾ. ರುದ್ರೇಶ ಘಾಳಿ

ಅದ್ಧೂರಿ ಕನ್ನಡ ರಾಜ್ಯೋತ್ಸವ ಆಚರಣೆಗೆ ನಿರ್ಧಾರ : ಡಾ. ರುದ್ರೇಶ ಘಾಳಿ

: ಪ್ರತಿ ವರ್ಷದಂತೆ ಈ ವರ್ಷ ಕೂಡ ಜಿಲ್ಲೆಯಲ್ಲಿ ಅದ್ಧೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಿಸಲು ನಿರ್ಧರಿಸಲಾಗಿದೆ ಎಂದು ಕೊಪ್ಪಳ ಅಪರ ಜಿಲ್ಲಾಧಿಕಾರಿ ಡಾ. ರುದ್ರೇಶ ಘಾಳಿ ಅವರು ಹೇಳಿದರು.
ಕನ್ನಡ ರಾಜ್ಯೋತ್ಸವ ಆಚರಣೆ ಕುರಿತು ಮಂಗಳವಾರದಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಪ್ರತಿ ವರ್ಷದಂತೆ ಈ ವರ್ಷವೂ ಕನ್ನಡ ರಾಜ್ಯೋತ್ಸವವನ್ನು ಅತ್ಯಂತ ಸಡಗರ ಸಂಭ್ರಮದಿಂದ ಆಚರಿಸಲಾಗುವುದು. ರಾಜ್ಯೋತ್ಸವದ ಅಂಗವಾಗಿ ನವೆಂಬರ್ 01 ರಂದು ಬೆಳಿಗ್ಗೆ 7 ಗಂಟೆಗೆ ಕನ್ನಡ ತಾಯಿ ಭುವನೇಶ್ವರಿ ದೇವಿ ಭಾವಚಿತ್ರದೊಂದಿಗೆ ಅದ್ಧೂರಿ ಮೆರವಣಿಗೆ ತಹಶಿಲ್ದಾರರ ಕಚೇರಿಯಿಂದ ಹೊರಡಲಿದೆ. ಮೆರವಣಿಗೆಯಲ್ಲಿ ವಿವಿಧ ಜಾನಪದ ಕಲಾ ತಂಡಗಳು ಭಾಗವಹಿಸಲಿವೆ. ಮೆರವಣಿಗೆಯಲ್ಲಿ ಎಲ್ಲ ಇಲಾಖಾ ಅಧಿಕಾರಿ, ಸಿಬ್ಬಂದಿಗಳು ಕಡ್ಡಾಯವಾಗಿ ಪಾಲ್ಗೊಳ್ಳಬೇಕು.
ನವೆಂಬರ್ 01 ರಂದು ಬೆಳಿಗ್ಗೆ 9 ಗಂಟೆಗೆ ಜಿಲ್ಲಾ ಕ್ರೀಡಾಂಗಣದಲ್ಲಿ ಧ್ವಜಾರೋಹಣ ಕಾರ್ಯಕ್ರಮ ನೆರವೇರಲಿದೆ. ಜಿಲ್ಲಾ ಉಸ್ತುವಾರಿ ಮಂತ್ರಿಗಳಾದ ಬಸವರಾಜ ರಾಯರಡ್ಡಿ ಅವರು ಧ್ವಜಾರೋಹಣ ನೆರವೇರಿಸುವರು. ಕಾರ್ಯಕ್ರಮದಲ್ಲಿ ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ಸೇವೆಸಲ್ಲಿಸಿದ ಸಾಹಿತಿಗಳನ್ನು ಸನ್ಮಾನಿಸಲಾಗುವುದು. ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಕನ್ನಡ ವಿಷಯದಲ್ಲಿ ಅತಿ ಹೆಚ್ಚು ಅಂಕಗಳಿಸಿರುವ ವಿದ್ಯಾರ್ಥಿಗಳಿ ಬಹುಮಾನ ವಿತರಿಸಲಾಗುವುದು. ಅಂದು ಸಂಜೆ ಸಾಹಿತ್ಯ ಭವನದಲ್ಲಿ ಕನ್ನಡ ಸಂಸ್ಕøತಿಕ ಕಾರ್ಯಕ್ರಮಗಳು ಜರುಗಲಿವೆ. ರಾಜ್ಯೋತ್ಸವದ ಅಂಗವಾಗಿ ನವೆಂಬರ್ 01 ರಿಂದ ಏಳು ದಿನಗಳವರೆಗೆ ಜಿಲ್ಲೆಯ ಎಲ್ಲಾ ಚಿತ್ರಮಂದಿರಗಳಲ್ಲಿ ಕನ್ನಡ ಚಿತ್ರಗಳನ್ನೇ ಪ್ರದರ್ಶಿಸಲು ಸಂಬಂದಪಟ್ಟ ಚಿತ್ರಮಂದಿರಗಳ ಮಾಲಿಕರುಗಳಿಗೆ ಸೂಚನೆ ನೀಡಲಾಗುವುದು. ರಾಜ್ಯೋತ್ಸವದ ಹಿಂದಿನ ದಿನ ನಗರದ ಪ್ರಮುಖ ರಸ್ತೆ ಮತ್ತು ಜಿಲ್ಲಾ ಕ್ರೀಡಾಂಗಣ ಹಾಗೂ ಸಾಹಿತ್ಯ ಭವನವನ್ನು ಸ್ವಚ್ಛಗೊಳಿಸಲು ಅಪರ ಜಿಲ್ಲಾಧಿಕಾರಿ ಡಾ. ರುದ್ರೇಶ ಘಾಳಿ ಅವರು ನಗರಸಭೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಭೆಯಲ್ಲಿ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕರಾದ ಶ್ರೀಶೈಲ್ ಕರಿಶಂಕರಿ, ಜಿಲ್ಲಾ ಅಂಕಿ ಸಂಖ್ಯೆ ಇಲಾಖೆ ಸಂಗ್ರಹಣಾಧಿಕಾರಿ ಕೃಷ್ಣಮೂರ್ತಿ ದೇಸಾಯಿ, ತಹಶಿಲ್ದಾರ ಗುರುಬಸವರಾಜ, ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷರಾದ ರಾಜಶೇಖರ ಅಂಗಡಿ, ಗಣ್ಯರಾದ ಶಿವಾನಂದ ಹೊದ್ಲೊರ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Top