ಕಾಂಗ್ರೆಸ್ ಜನಪರ ಯೋಜನೆಗಳನ್ನು ನೀಡಿದೆ : ಇಂದಿರಾ ಭಾವಿಕಟ್ಟಿ

ಕೊಪ್ಪಳ : ರಾಜ್ಯದಲ್ಲಿ ಸಿಎಂ ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಜನಪರ ಯೋಜನೆಗಳನ್ನು ನೀಡಿದೆ ಎಂದು ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಇಂದಿರಾ ಭಾವಿಕಟ್ಟಿ ಹೇಳಿದರು.
ಅವರು ಭಾಗ್ಯನಗರ ಪಟ್ಟಣದಲ್ಲಿ ಮನೆ ಮನೆಗೆ ಕಾಂಗ್ರೆಸ್ ಅಭಿಯಾನಕ್ಕೆ ಚಾಲನೆ ನೀಡಿ

ಮಾತನಾಡಿದ ಅವರು ರಾಜ್ಯದಲ್ಲಿ 2013 ಚುನಾವಣಾ ಪ್ರಣಾಳಿಕೆಯಲ್ಲಿ ರಾಜ್ಯದ ಜನತೆಗೆ ನೀಡಿದ ಭರವಸೆಗಳನ್ನು ನೀಡಿದ ಕಾಂಗ್ರೇಸ್ ಪಕ್ಷವು ತನ್ನ ಅಧಿಕಾರದ ಬಹುತೇಕ ಭರವಸೆಗಳನ್ನು ಈಡೇರಿಸಿದೆ ರಾಜ್ಯದಲ್ಲಿ ಹಸಿವು ನೀಗಿಸಲು ಅನ್ನಭಾಗ್ಯ, ಮಕ್ಕಳಿಗೆ ಕ್ಷೀರಭಾಗ್ಯ, ವಿದ್ಯಾಸಿರಿ,ಜನತೆಗೆ ಪಶುಭಾಗ್ಯ, ಕೃಷಿಭಾಗ್ಯ, ಶಾದಿ ಭಾಗ್ಯ, ಮನಸ್ವಿನಿ, ಮೈತ್ರಿ, ಹಾಗೂ ಕ್ಷೀರಧಾರೆಯಂತಹ ಜನಪರ ಯೋಜನೆಗಳನ್ನು ರಾಜ್ಯದ ಎಲ್ಲಾ ವರ್ಗದ ಜನರಿಗೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಜನಪರ ಸರ್ಕಾರ ನುಡಿದಂತೆ ಅವರು ನಡೆದು ರಾಜ್ಯದ ಜನತೆಯ ಮನಸ್ಸಿನಲ್ಲಿ ಉಳಿದಿದ್ದಾರೆ, ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಸರ್ಕಾರವು ಎಲ್ಲಾ ಕ್ಷೇತ್ರಗಳಲ್ಲಿಯೂ ಸಂಪೂರ್ಣ ವಿಫಲವಾಗಿದ್ದು, ಇದು ಜನತೆಗೆ ಗೊತ್ತೀರುವ ಸಂಗತಿ ಪ್ರತಿಯೊಬ್ಬ ಕಾಂಗ್ರೇಸ್ ಪಕ್ಷದ ಮುಖಂಡರು, ಕಾರ್ಯಕರ್ತರು ರಾಜ್ಯದ ಕಾಂಗ್ರೆಸ್ ನೇತೃತ್ವದ ಸರ್ಕಾರದ ಸಾಧನೆಗಳನ್ನು ಮನೆ ಮನೆಗೆ ತಲುಪಿಸುವ ಕಾರ್ಯ ಮಾಡಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಮತ್ತೋಮ್ಮೆ ಅಧಿಕಾರಕ್ಕೆ ತರಲು ಎಲ್ಲಾರೂ ಶ್ರಮಿಸಬೇಕು ಎಂದು ಮಹಿಳಾ ಮುಖಂಡರಿಗೆ-ಕಾರ್ಯಕರ್ತರಿಗೆ ಕರೆ ನೀಡಿದರು.
ಈ ಸಂದರ್ಭದಲ್ಲಿ ತಾಲೂಕಾ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸವಿತಾ ಗೋರಂಟ್ಲಿ, ಪಟ್ಟಣ ಪಂಚಾಯತ್ ಸದಸ್ಯೆ ಯಶೋಧ ಮರಡಿ, ಸುಮಿತ್ರಾ ಕಲಾಲ್, ಜಿಲ್ಲಾ ಮಹಿಳಾ ಕಾಂಗ್ರೆಸ್ ಪದಾಧಿಕಾರಿಗಳಾದ ಚನ್ನಮ್ಮ ಮುಳಗುಂದ, ಮಹಾದೇವಿ ಮಡಿವಾಳ,ನೀಲಮ್ಮ ಬಗನಾಳ, ಮಂಜುಳಾ ಹುಲ್ಲೂರು,ಗಂಗಮ್ಮ ಚಿಕ್ಕೇನಕೊಪ್ಪ, ಪಾರ್ವತಿ ಹುರಕಡ್ಲಿ ಸೇರಿದಂತೆ ಅನೇಕ ಕಾಂಗ್ರೆಸ್ ಮಹಿಳಾ ಕಾರ್ಯಕರ್ತರು ಪಾಲ್ಗೋಂಡಿದ್ದರು.

Please follow and like us:
error