ಅನರ್ಹರಿಗೆ ಉಪ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ

ಹೊಸದಿಲ್ಲಿ ನ . 13 : ಪಕ್ಷ ವಿರೋಧಿ ಚಟುವಟಿಕೆಗಳ ಹಿನ್ನೆಲೆಯಲ್ಲಿ ಕಾಂಗ್ರೆಸ್ , ಜೆಡಿಎಸ್ ಪಕ್ಷಗಳ 17 ಶಾಸಕರನ್ನು ಅನರ್ಹಗೊಳಿಸಿರುವ ಸ್ಪೀಕರ್‌ ಆದೇಶವನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ . ಆದರೆ ಅನರ್ಹ ಶಾಸಕರಿಗೆ ಉಪ 
ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ಕಲ್ಪಿಸಿದೆ . ಶಾಸಕರ ಅನರ್ಹತೆಗೆ ಕಾಲಾವಧಿ ನಿಗದಿಪಡಿಸುವಂತಿಲ್ಲ ಎಂದಿರುವ ಸುಪ್ರೀಂ ಕೋರ್ಟ್‌ , ಉಪಚುನಾವಣೆಯಲ್ಲಿ ಮತ್ತೆ ಸ್ಪರ್ಧಿಸಬಹುದು ಎಂದು ಆದೇಶದಲ್ಲಿ ತಿಳಿಸಿದೆ . ಅಂದಿನ ವಿಧಾನಸಭೆಯ ಸ್ಪೀಕರ್ ಕೆ . ಆರ್‌ . ರಮೇಶ್‌ಕುಮಾರ್ ಅವರು ಕಾಂಗ್ರೆಸ್‌ನ 13 , ಜೆಡಿಎಸ್ 3 ಹಾಗೂ ಪಕ್ಷೇತರ ಶಾಸಕ ಆರ್‌ . ಶಂಕರ್ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಿದ್ದರು . ಜೊತೆಗೆ ಈ ವಿಧಾನಸಭೆಯ ಅವಧಿ ಮುಗಿಯುವವರೆಗೂ ಅವರು ಯಾವುದೇ ರೀತಿಯ ಸಾಂವಿಧಾನಿಕ ಸ್ಥಾನವನ್ನು ಅಲಂಕರಿಸುವಂತಿಲ್ಲ ಮತ್ತು ವಿಧಾನಸಭೆ ಪ್ರವೇಶಿಸುವಂತಿಲ್ಲ ಎಂದು ಆದೇಶಿಸಿದ್ದರು . ಇದನ್ನು ಪ್ರಶ್ನಿಸಿ ಅನರ್ಹ ಶಾಸಕರು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು . ಇದೀಗ ಎರಡೂ ಕಡೆಯ ವಾದವನ್ನು ಆಲಿಸಿರುವ ಸುಪ್ರೀಂಕೋರ್ಟ್ ನ ನ್ಯಾಯಮೂರ್ತಿ ಎನ್ . ವಿ . ರಮಣ್ ನೇತೃತ್ವದ ತ್ರಿಸದಸ್ಯ ಪೀಠ ತೀರ್ಪು ಪ್ರಕಟಿಸಿದೆ . ಸಂಸದೀಯ ವ್ಯವಸ್ಥೆಯಲ್ಲಿ ನೈತಿಕತೆ ಮುಖ್ಯ , ಆಡಳಿತ ಪಕ್ಷ ಮತ್ತು ವಿಪಕ್ಷ ಎರಡರಲ್ಲೂ ನೈತಿಕತೆ ಇರಬೇಕು . ಶಾಸಕರ ನಡೆಯನ್ನು ಪ್ರೋತ್ಸಾಹಿಸುವುದಿಲ್ಲ . ಎರಡೆರಡು ವಿಚಾರಣೆ ಬೇಡ ಎಂದು ನಾವೇ ವಿಚಾರಣೆ ಮಾಡಿದ್ದೇವೆ . ಸ್ಪೀಕರ್ ಆದೇಶವನ್ನು ಪರಶೀಲನೆ ಮಾಡಿದ್ದೇವೆ ಎಂದು ನ್ಯಾಯಮೂರ್ತಿ ಎನ್ . ವಿ . ರಮಣ್ ತೀರ್ಪಿನಲ್ಲಿ ಉಲ್ಲೇಖಿಸಿದ್ದಾರೆ .

Please follow and like us:
error