ಎನಕೌಂಟರ್ ಪ್ರಕರಣ ತನಿಖೆಗೆ ವಿಶೇಷ ತನಿಖಾ ತಂಡ ರಚನೆ

 ಹೈದರಾಬಾದ್ , ಡಿ . 9 : ಪಶುವೈದ್ಯೆಯ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದ ಆರೋಪಿಗಳನ್ನು ಪೊಲೀಸರು ಎನ್‌ಕೌಂಟರ್‌ ನಡೆಸಿ ಹತ್ಯೆ ಮಾಡಿರುವ ಪ್ರಕರಣದ ಬಗ್ಗೆ ತನಿಖೆ ನಡೆಸಲು ತೆಲಂಗಾಣ ಸರಕಾರ ವಿಶೇಷ ತನಿಖಾ ತಂಡವನ್ನು ರಚಿಸಿದೆ . ಈ ಬಗ್ಗೆ ಸರಕಾರ ರವಿವಾರ ಆದೇಶ ಹೊರಡಿಸಿದೆ . ನಾಲ್ವರು ವ್ಯಕ್ತಿಗಳ ಹತ್ಯೆಗೆ ಕಾರಣ ಮತ್ತು ಸನ್ನಿವೇಶವನ್ನು 

ಕಂಡುಹಿಡಿಯಲು ಮತ್ತು ವಾಸ್ತವಾಂಶವನ್ನು ದೃಢಪಡಿಸಲು ನಿರಂತರ ಮತ್ತು ಕೇಂದ್ರೀಕೃತ ತನಿಖೆ ಅಗತ್ಯವಿದೆ . ಆದ್ದರಿಂದ ವಿಶೇಷ ತನಿಖಾ ತಂಡವನ್ನು ರಚಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ . ರಾಚಕೊಂಡ ಪೊಲೀಸ್ ಆಯುಕ್ತ ಮಹೇಶ್ ಎಂ ಭಾಗ್ರತ್ ನೇತೃತ್ವದ ವಿಶೇಷ ತನಿಖಾ ತಂಡ ತಕ್ಷಣದಿಂದಲೇ ತನಿಖಾ ಕಾರ್ಯ ಕೈಗೆತ್ತಿಕೊಳ್ಳಬೇಕು . ತನಿಖೆಯನ್ನು ಪೂರ್ಣಗೊಳಿಸಿ ಸಕ್ರಮ ನ್ಯಾಯಾಲಯಕ್ಕೆ ವರದಿ ಸಲ್ಲಿಸಬೇಕು ಎಂದು ಆದೇಶ ತಿಳಿಸಿದೆ . * ಪಶುವೈದ್ಯೆಯ ಮೇಲೆ ಅತ್ಯಾಚಾರ ನಡೆಸಿ ಸುಟ್ಟುಹಾಕಿದ ಆರೋಪದಲ್ಲಿ ನಾಲ್ವರನ್ನು ನವೆಂಬರ್ 29ರಂದು ಪೊಲೀಸರು ಬಂಧಿಸಿದ್ದರು . ವಿಚಾರಣೆಯ ಅಂಗವಾಗಿ ಡಿ . 6ರ ಮುಂಜಾನೆ ಆರೋಪಿಗಳನ್ನು ಕೃತ್ಯ ನಡೆದ ಸ್ಥಳಕ್ಕೆ ಕರೆದುಕೊಂಡು ಹೋಗಿದ್ದಾಗ ಅವರು ಪೊಲೀಸರ ಕೈಯಲ್ಲಿದ್ದ ಗನ್ ಕಿತ್ತುಕೊಂಡು ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ್ದರು . ಪೊಲೀಸರು ರಕ್ಷಣೆಗಾಗಿ ಗುಂಡು ಹಾರಿಸಿ ನಾಲ್ವರು ಆರೋಪಿಗಳು ಮೃತಪಟ್ಟಿದ್ದಾರೆ ಎಂದು ಪೊಲೀಸರು ಹೇಳಿಕೆ ನೀಡಿದ್ದರು . ಪೊಲೀಸ್ ಎನ್‌ಕೌಂಟರ್‌ನ ಪರ – ವಿರೋಧ ಚರ್ಚೆ ನಡೆಯುತ್ತಿರುವಂತೆಯೇ , ರಾಷ್ಟ್ರೀಯ ಮಾನವ ಹಕ್ಕು ಆಯೋಗ ಪ್ರಕರಣದ ತನಿಖೆಗೆ  ಸದಸ್ಯರ ತನಿಖಾ ಸಮಿತಿಯನ್ನು ನೇಮಿಸಿದೆ .

Please follow and like us:
error