ಖಮರುಲ್ ಇಸ್ಲಾಂ ಇನ್ನಿಲ್ಲ

ಮಾಜಿ ಸಚಿವ ಹಿರಿಯ ಕಾಂಗ್ರೆಸ್ ನಾಯಕ ಖಮರುಲ್ ಇಸ್ಲಾಂ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಹೈದ್ರಾಬಾದ್ ಕರ್ನಾಟಕದ ಹಿರಿಯ ಕಾಂಗ್ರೆಸ್ ನಾಯಕರಾಗಿದ್ದ ಖಮರುಲ್ ಇಸ್ಲಾಂ ನಗರದಲ್ಲಿ ಹೃದಯಾಘಾತದಿಂದ ನಿಧನರಾದರು. ಸಿದ್ದರಾಮಯ್ಯ ನೇತೃತ್ವದ ಸರ್ಕಾರದಲ್ಲಿ ಮೊದಲ ಮೂರು ವರ್ಷ ಪೌರಾಡಳಿತ ಸಚಿವರಾಗಿದ್ದ ಖಮರುಲ್ ವರ್ಷದ ಹಿಂದೆ ನಡೆದ ಸಚಿವ ಸಂಪುಟ ಪುನರ್‌ ರಚನೆ ವೇಳೆ ಸಚಿವ ಸ್ಥಾನ ಕಳೆದುಕೊಂಡಿದ್ದರು.

ಅವರನ್ನು ಕೇರಳ ಕಾಂಗ್ರೆಸ್ ಉಸ್ತುವಾರಿ ಹಾಗೂ ಅಖಿಲ ಭಾರತ ಕಾಂಗ್ರೆಸ್‌ ಸಮಿತಿ (ಎಐಸಿಸಿ) ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿತ್ತು. ಒಂದು ಬಾರಿ ಸಂಸದರಾಗಿಯೂ ಆಯ್ಕೆಯಾಗಿದ್ದರು.

Please follow and like us:
error