ಡಾ.ಕಫೀಲ್‌ ಖಾನ್‌ ಬಿಡುಗಡೆಗೆ & NSA ಪ್ರಕರಣ ಕೈಬಿಡಲು ಅಲಹಾಬಾದ್ ಹೈಕೋರ್ಟ್ ಆದೇಶ

ರಾಷ್ಟ್ರೀಯ ಭದ್ರತಾ ಕಾಯಿದೆಯಡಿ (ಎನ್‌ಎಸ್‌ಎ) ಬಂಧನದಲ್ಲಿರುವ ಉತ್ತರ ಪ್ರದೇಶದ ಡಾ.ಕಫೀಲ್‌ ಖಾನ್‌ ಅವರನ್ನು ಕೂಡಲೇ ಬಿಡುಗಡೆಗೊಳಿಸುವಂತೆ ಮತ್ತು ಅವರ ಮೇಲಿನ NSA ಪ್ರಕರಣ ಕೈಬಿಡುವಂತೆ ಇಂದು ಅಲಹಾಬಾದ್ ಹೈಕೋರ್ಟ್ ಆದೇಶಿಸಿದೆ.

ಸಿಎಎ ವಿರೋಧಿ ಹೋರಾಟಗಳು ಉತ್ತುಂಗದಲ್ಲಿದ್ದಾಗ 2019 ರ ಡಿಸೆಂಬರ್ 13 ರಂದು ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಮೇಲೆ ಡಾ.ಕಫೀಲ್‌ ಖಾನ್ ಅವರನ್ನು ಜನವರಿಯಲ್ಲಿ ಮುಂಬೈನಲ್ಲಿ ಬಂಧಿಸಲಾಗಿತ್ತು.

ಕಫೀಲ್‌ ಖಾನ್‌ರವರ ಭಾಷಣವು ಹಿಂಸೆಯನ್ನು ಪ್ರಚೋದಿಸುವಂತಿರಲಿಲ್ಲ. ಅದು ರಾಷ್ಟ್ರೀಯ ಏಕತೆ ಮತ್ತು ಜನರ ನಡುವೆ ಭಾವೈಕ್ಯತೆಯನ್ನು ಸಾರುವಂತೆ ಕರೆ ಕೊಡುವಂತಿತ್ತು ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

Please follow and like us:
error