ತೋಂಟದಾರ್ಯ ಮಠದ ಆವರಣದಲ್ಲಿ ಶ್ರೀಗಳ ಅಂತ್ಯಸಂಸ್ಕಾರ

ಗದಗ : ತೋಂಟದಾರ್ಯ ಮಠದ ಆವರಣದಲ್ಲಿ ಶ್ರೀಗಳ ಅಂತ್ಯಸಂಸ್ಕಾರ.

ಪುಷ್ಪ, ವಿಭೂತಿ ಉಂಡೆಗಳು ಅರ್ಪಿಸುವ ಮೂಲಕ ವಿಧಿವಿಧಾನ ಪೂರ್ಣ.

ಗದಗ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಮಠಕ್ಕೆ ಆಗಮಿಸಿದ ಪಾರ್ಥಿವ ಶರೀರ.ಆನಂದಪುರ ಮಲ್ಲಿಕಾರ್ಜುನ ಶ್ರೀಗಳ ನೇತೃತ್ವದಲ್ಲಿ ವಿಧಿವಿಧಾನ

ಬಸವತತ್ವ ಪ್ರಕಾರ ಶ್ರೀಗಳ ಅಂತ್ಯ ಸಂಸ್ಕಾರ. ಪಂಚಭೂತಗಳಲ್ಲಿ ಲೀನವಾದ ತೋಂಟದಾರ್ಯ ಶ್ರೀಗಳು. ಸಕಲ ಸರ್ಕಾರಿ ಗೌರವಗಳೊಂದಿಗೆ ಶ್ರೀಗಳ ಅಂತ್ಯಕ್ರಿಯೆ. ಗಾಳಿಯಲ್ಲಿ ಮೂರು ಸುತ್ತು ಗುಂಡು ಹಾರಿಸಿ ಗೌರವ ಸೂಚಿಸಿದ ಪೊಲೀಸ್ ಪಡೆಗಳು

ಲಿಂಗಾಯತ ಧಾರ್ಮಿಕ ವಿಧಿವಿಧಾನಗಳ ಮೂಲಕ ಶ್ರೀಗಳ ಅಂತ್ಯಕ್ರಿಯೆ

ತೋಂಟದಾರ್ಯ ಮಠದ ಆವರಣದಲ್ಲಿ ನಡೆದ ಶ್ರೀಗಳ ಅಂತ್ಯ ಸಂಸ್ಕಾರ. ಅಂತ್ಯ ಸಂಸ್ಕಾರ ಕಾರ್ಯಕ್ರಮದಲ್ಲಿ ಚಿತ್ರದುರ್ಗದ ಮುರಘಾ ಶರಣರು, ಹರಿಹರ ಪಂಚಮಸಾಲಿ ಪೀಠದ ವಚನಾನಂದ ಶ್ರೀಗಳು, ಕೂಡಲಸಂಗಮ ಪೀಠದ ಜಯಮೃತ್ಯುಂಜಯ ಶ್ರೀಗಳು ಸೇರಿದಂತೆ ನೂರಾರು ಮಠಾಧೀಶರು, ಶಾಸಕ ಎಚ್ ಕೆ ಪಾಟೀಲ್, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ, ಶಾಸಕ ಶ್ರೀರಾಮುಲು ಸೇರಿದಂತೆ ಹಲವು ಗಣ್ಯರು ಭಾಗಿ

Please follow and like us:
error