ದೇವೇಂದ್ರ ಫಡ್ನವೀಸ್, ಅಜಿತ್ ಪವಾರ್ ರಾಜೀನಾಮೆ

ಮುಂಬೈ , ನ . 26 : ಸುಪ್ರೀಂಕೋರ್ಟ್ ತೀರ್ಪಿನ ಬಳಿಕ ಮಹಾರಾಷ್ಟ್ರದಲ್ಲಿ ರಾಜಕೀಯ ಬೆಳವಣಿಗೆಗಳು ಕ್ಷಣಕ್ಷಣಕ್ಕೂ ಬದಲಾಗುತ್ತಿದ್ದು , ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ | 

ಮಧ್ಯಾಹ್ನ 3 : 30ಕ್ಕೆ ಕರೆದಿರುವ ಸುದ್ದಿಗೋಷ್ಠಿಯಲ್ಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದಾರೆ . ಶನಿವಾರ ರಾತೋರಾತ್ರಿ ಮಹಾರಾಷ್ಟ್ರದಲ್ಲಿ ಸರಕಾರ ರಚಿಸಿದ್ದ ಬಿಜೆಪಿಗೆ ಸುಪ್ರೀಂಕೋರ್ಟ್ ಬುಧವಾರವೇ ಬಹುಮತ ಸಾಬೀತುಪಡಿಸಲು ಆದೇಶಿಸಿತ್ತು . ಬಹುಮತ ಸಾಬೀತಿಗೆ ಮೊದಲೇ ಮುಖ್ಯಮಂತ್ರಿ ಫಡ್ನವಿಸ್ ಹಾಗೂ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ರಾಜೀನಾಮೆ ನೀಡಿದ್ದಾರೆ .

Please follow and like us:
error