ಮಹಾರಾಷ್ಟ್ರ ಸಿಎಂ ಆಗಿ ಫಡ್ನವೀಸ್ , ಡಿಸಿಎಂ ಆಗಿ ಅಜಿತ್ ಪವಾರ್ ಪ್ರಮಾಣ

ಮುಂಬೈ ,  :  ಭಾರೀ ಅಚ್ಚರಿಯ ಕ್ಷಿಪ್ರ ಬೆಳವಣಿಗೆಯಲ್ಲಿ 

ಶನಿವಾರ ಬೆಳಿಗ್ಗೆ ಮಾಜಿ ಮುಖ್ಯಮಂತ್ರಿ , ಬಿಜೆಪಿಯ ದೇವೇಂದ್ರ ಫಡ್ನವೀಸ್ 2ನೇ ಬಾರಿ ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿ , ಎನ್ ಸಿಪಿ ಪಕ್ಷದ ಅಜಿತ್ ಪವಾರ್ ಉಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ . ಶಿವಸೇನೆಯ ಉದ್ಧವ್ ಠಾಕ್ರೆ ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಸ್ವತಃ ಶರದ್ ಪವಾರ್ ಅವರೇ ಶುಕ್ರವಾರ ಘೋಷಿಸಿದ ಬೆನ್ನಿಗೇ ಈ ಬೆಳವಣಿಗೆ ನಡೆದಿದೆ . ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ನೂತನ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗೆ ಶುಭಾಶಯ ಕೋರಿದ್ದಾರೆ .

Please follow and like us:
error