ನವಜೋತ್ ಸಿಂಗ್ ಸಿಧು  ಮನೆಯ ಹೊರಗೆ ನೋಟಿಸ್ ಅಂಟಿಸಿದ ಬಿಹಾರ ಪೋಲಿಸರು

ಅಮೃತಸರ:  ಕಾಂಗ್ರೆಸ್ ಶಾಸಕ ನವಜೋತ್ ಸಿಂಗ್ ಸಿದ್ದು ವಿರುದ್ಧ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಭೇಟಿಯಾಗಲು ಬನ್ನಿ ಎನ್ನುವ ಪತ್ರಕ್ಕೆ  ಯಾವುದೇ ಪ್ರತಿಕ್ರಿಯೆ ಬಾರದ ಹಿನ್ನೆಲೆ ಅವರ ನಿವಾಸದ ಹೊರಗೆ ಬಿಹಾರ ಪೊಲೀಸರು ನೋಟಿಸ್ ಹಚ್ಚಿದ್ದಾರೆ.  2019 ರ ಲೋಕಸಭಾ ಚುನಾವಣೆಯಲ್ಲಿ ಬಿಹಾರದ ಕಟಿಹಾರ್ ಜಿಲ್ಲೆಯಲ್ಲಿ ನಡೆದ ಚುನಾವಣಾ ಸಭೆಯಲ್ಲಿ ಮಾತನಾಡುತ್ತಾ ಸಮುದಾಯದ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಕ್ಕಾಗಿ ನೀತಿ ಸಂಹಿತೆ ಉಲ್ಲಂಘಿಸಿದ್ದಕ್ಕಾಗಿ ಕಾಂಗ್ರೆಸ್ ಶಾಸಕ ನವಜೋತ್ ಸಿಂಗ್ ಸಿದ್ದು ವಿರುದ್ಧ ಪ್ರಕರಣ ದಾಖಲಾಗಿತ್ತು.

ಮಾದರಿ ನೀತಿ ಸಂಹಿತೆ ಉಲ್ಲಂಘನೆಗಾಗಿ ಮಾಜಿ ಸಚಿವ ನವಜೋತ್ ಸಿಂಗ್ ಸಿಧು ವಿರುದ್ಧ ಬಿಹಾರದಲ್ಲಿ ನಡೆದ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಪ್ರಕರಣ ನಡೆದಿತ್ತು ಎಂದು ಅವರು ಹೇಳಿದರು.

 

Please follow and like us:
error