ಅ.21 ರಿಂದ ಕೊಪ್ಪಳದಲ್ಲಿ ಜೇನು ಮೇಳ

ಜೇನು ಪ್ರದರ್ಶನ ಮತ್ತು ಮಾರಾಟ ಮೇಳ : ಕೃಷಿ ತಾಂತ್ರಿಕ ಕಾರ್ಯಾಗಾರ
ಕೊಪ್ಪಳ ಅ. : : ಕೊಪ್ಪಳ ತೋಟಕಾರಿಕೆ ಇಲಾಖೆ (ಜಿ.ಪಂ.) ವತಿಯಿಂದ “ಜೇನು ಮೇಳ’’ ಜೇನು ಪ್ರದರ್ಶನ ಮತ್ತು ಮಾರಾಟ ಮೇಳ ಹಾಗೂ ಜೇನು ಕೃಷಿ ತಾಂತ್ರಿಕ ಕಾರ್ಯಾಗಾರವನ್ನು ಅ. 21 ರಿಂದ 23 ರವರೆಗೆ ಆಯೋಜಿಸಲಾಗಿದ್ದು, ಕಾರ್ಯಕ್ರಮದ ಉದ್ಘಾಟನಾ ಸಮಾರಂಭವನ್ನು ಅ. 21 ರಂದು ಬೆಳಿಗ್ಗೆ 10-30 ಗಂಟೆಗೆ ಕೊಪ್ಪಳ ತೋಟಗಾರಿಕೆ ಕಛೇರಿ ಆವರಣದಲ್ಲಿ ಏರ್ಪಡಿಸಲಾಗಿದೆ.
ಕರ್ನಾಟಕ ಸರ್ಕಾರದ ಉಪ ಮುಖ್ಯಮಂತ್ರಿಗಳು, ಸಾರಿಗೆ ಮತ್ತು ಕೃಷಿ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವರಾದ ಲಕ್ಷö್ಮಣ ಸಂಗಪ್ಪ ಸವದಿ ಅವರು ಕಾರ್ಯಕ್ರಮದ ಉದ್ಘಾಟನೆ ನೆರೆವೇರಿಸುವರು.  ಶಾಸಕ ಕೆ. ರಾಘವೇಂದ್ರ ಹಿಟ್ನಾಳ್ ಸಮಾರಂಭದ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಜಿ.ಪಂ. ಅಧ್ಯಕ್ಷ ಹೆಚ್. ವಿಶ್ವನಾಥ ರೆಡ್ಡಿ, ಸಂಸದ ಕರಡಿ ಸಂಗಣ್ಣ, ಶಾಸಕರುಗಳಾದ ಅಮರೇಗೌಡ ಪಾಟೀಲ್ ಬಯ್ಯಾಪುರ, ಪರಣ್ಣ ಈಶ್ವರಪ್ಪ ಮುನವಳ್ಳಿ, ಹಾಲಪ್ಪ ಆಚಾರ ಹಾಗೂ ಬಸವರಾಜ ದಢೇಸೂಗೂರು, ವಿಧಾನಪರಿಷತ್ ಸದಸ್ಯರುಗಳಾದ ಬಸವರಾಜ ಪಾಟೀಲ ಇಟಗಿ, ಡಾ. ಚಂದ್ರಶೇಖರ ಬಿ. ಪಾಟೀಲ ಹಾಗೂ ಶರಣಪ್ಪ ಮಟ್ಟೂರ, ಜಿ.ಪಂ. ಉಪಾಧ್ಯಕ್ಷೆ ರತ್ನವ್ವ ಭರಮಪ್ಪ ನಗರ, ಕೃಷಿ ಮತ್ತು ಕೈಗಾರಿಕಾ ಸ್ಥಾಯಿಸಮಿತಿ ಅಧ್ಯಕ್ಷ ಗೂಳಪ್ಪ ಹಲಗೇರಿ, ತಾ.ಪಂ ಅಧ್ಯಕ್ಷ ಬಾಲಚಂದ್ರನ್, ಜಿಲ್ಲಾ  ಕೃಷಿಕರ ಸಮಾಜದ ಅಧ್ಯಕ್ಷ ಶಿವಣ್ಣ ಮೂಲಿಮನಿ, ತಾಲ್ಲೂಕ ಕೃಷಿಕ ಸಮಾಜದ ಅಧ್ಯಕ್ಷ ಹೆಚ್.ವಿ. ವಿರುಪಾಕ್ಷಪ್ಪ, ಜಿಲ್ಲಾ ಹಾಪ್‌ಕಾಮ್ಸ್ ಅಧ್ಯಕ್ಷ ಯಂಕಣ್ಣ ಯರಾಶಿ ಪಾಲ್ಗೊಳ್ಳುವರು.
ಕಾರ್ಯಾಗಾರದ ಅಂಗವಾಗಿ ತಾಂತ್ರಿಕ ಉಪನ್ಯಾಸಕರಾಗಿ ಕೊಪ್ಪಳ (ಕೀಟ ಶಾಸ್ತç) ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರದ ವಿಜ್ಞಾನಿಗಳಾದ ಡಾ. ಪಿ.ಆರ್. ಬದರಿಪ್ರಸಾದ್, ಶಿರಸಿ ತಾಲ್ಲೂಕಿನ ತಾರಗೋಡ ಪ್ರಗತಿ ಪರ ರೈತರು, ಜೇನು ಕೃಷಿಕರು ಹಾಗೂ ನಾಟಿ ವೈದೈರಾದ ಮಧುಕೇಶ್ವರ್ ಜೆ. ಹೆಗಡೆ, ಶಿರಸಿಯ ಪ್ರಗತಿ ಪರ ಜೇನು ಕೃಷಿಕರಾದ ಪಾಂಡುರಂಗ ಹೆಗಡೆ ಭಾಗವಹಿಸುವರು.
ವಿಶೇಷ ಆಹ್ವಾನಿತರಾಗಿ ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಮತ್ತು ಜಿವನೋಪಾಯ ಇಲಾಖೆ ಸರ್ಕಾರದ ಕಾರ್ಯದರ್ಶಿಗಳು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿದಳಾದ ಡಾ. ಎಸ್. ಸೆಲ್ವಕುಮಾರ್, ಕೃಷಿ ಹಾಗೂ ತೋಟಗಾರಿಕೆ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಜೇಂದ್ರಕುಮಾರ ಕಠಾರಿಯಾ, ಲಾಲ್‌ಬಾಗ್ ತೋಟಗಾರಿಕೆ ನಿರ್ದೇಶಕರು ಬಿ. ವೆಂಕಟೇಶ, ಕೊಪ್ಪಳ ಜಿಲ್ಲಾಧಿಕಾರಿ ಪಿ. ಸುನೀಲ್ ಕುಮಾರ್, ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಘುನಂದನ್ ಮೂರ್ತಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ. ಸಂಗೀತಾ, ಲಾಲ್‌ಬಾಗ್ ತೋಟಗಾರಿಕೆ ಅಪರ ನಿರ್ದೇಶಕರಾದ (ತಾಳೆ ಬೆಳೆ) ಹೆಚ್.ಎಸ್. ಶಿವಕುಮಾರ, ಲಾಲ್‌ಬಾಗ್ ತೋಟಗಾರಿಕೆ ಜಂಟಿ ನಿರ್ದೇಶಕರು ಹಾಗೂ ಜಿಲ್ಲಾ ನೋಡಲ್ ಅಧಿಕಾರಿ ಕೃಷ್ಣಮೂರ್ತಿ, ಕಲಬುರಗಿ ವಿಭಾಗದ ತೋಟಗಾರಿಕೆ ಜಂಟಿ ನಿರ್ದೇಶಕರು ಎಸ್.ಬಿ. ದಿಡ್ಡಿಮನಿ, ಮುನಿರಾಬಾದ್ ತೋಟಗಾರಿಕೆ ಮಹಾವಿದ್ಯಾಲಯದ ಡೀನ್ ಡಾ. ಪಿ.ಎಂ. ಗಂಗಾಧರಪ್ಪ, ಕೊಪ್ಪಳ ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರ ವಿಸ್ತರಣಾ ಮುಂದಾಳು ಡಾ. ಎಮ್.ಬಿ ಪಾಟೀಲ್, ಅವರು ಪಾಲ್ಗೊಳ್ಳಲಿದ್ದಾರೆ ಎಂದು ಕೊಪ್ಪಳ ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಕೃಷ್ಣ ಉಕ್ಕುಂದ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Please follow and like us:
error