ಕಂದಾಯ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಸಿಬ್ಬಂದಿಗಳ ಪದೋನ್ನತಿ ಮೂಲಕ ಭರ್ತಿ- DC ಪಿ.ಸುನಿಲ್ ಕುಮಾರ್

ಕೊಪ್ಪಳ ಜು. : ಕೊಪ್ಪಳ ಜಿಲ್ಲೆಯ ಕಂದಾಯ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಗ್ರಾಮಲೆಕ್ಕಾಧಿಕಾರಿ ಮತ್ತು ದ್ವಿ.ದ.ಸ ಸಿಬ್ಬಂದಿಗಳಿಗೆ ಪದೋನ್ನತಿ ನೀಡುವ ಮೂಲಕ ಭರ್ತಿಗೆ ಕ್ರಮ ವಹಿಸಲಾಗಿದೆ ಎಂದು ಕೊಪ್ಪಳ ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್‌ರವರು ತಿಳಿಸಿದ್ದಾರೆ. 

ಕೊಪ್ಪಳ ಜಿಲ್ಲೆಯ ಕಂದಾಯ ಇಲಾಖೆಯ ವ್ಯಾಪ್ತಿಗೆ ಒಳಪಡುವ ಕಛೇರಿಗಳಲ್ಲಿ ಖಾಲಿ ಇರುವ ಹಾಗೂ ವಿಶೇಷವಾಗಿ ಹೊಸದಾಗಿ ರಚಿಸಲಾದ ಕನಕಗಿರಿ, ಕಾರಟಗಿ ಮತ್ತು ಕುಕನೂರು ತಹಶೀಲ್ದಾರ್ ಕಛೇರಿಗಳಲ್ಲಿ ಖಾಲಿ ಇರುವ ಪ್ರಥಮ ದರ್ಜೆ ಸಹಾಯಕರು ಮತ್ತು ಕಂದಾಯ ನಿರೀಕ್ಷಕರ ಹುದ್ದೆಗಳನ್ನು ಕಂದಾಯ ಇಲಾಖೆಯ ಗ್ರಾಮಲೆಕ್ಕಾಧಿಕಾರಿ ಮತ್ತು ದ್ವಿ.ದ.ಸ ಸಿಬ್ಬಂದಿಗಳಿಗೆ ಪದೋನ್ನತಿ ನೀಡುವ ಮೂಲಕ ಭರ್ತಿ ಮಾಡಿ ಕಛೇರಿಯ ದೈನಂದಿನ ಕೆಲಸಗಳನ್ನು ಮತ್ತು ಸಾರ್ವಜನಿಕರ ಕೆಲಸ ಕಾರ್ಯಗಳ ತ್ವರಿತ ವಿಲೇವಾರಿಗೆ ಕ್ರಮ ವಹಿಸಲಾಗಿರುತ್ತದೆ ಎಂದು ಪ್ರಕಟಣೆ ತಿಳಿಸಿದೆ. 

Please follow and like us:
error