ಕಿಮ್ಸ್ : ಬೋಧಕ ಮತ್ತು ಬೋಧಕೇತರ ಹುದ್ದೆಗಳ ನೇಮಕಾತಿ ರದ್ದು

ಕೊಪ್ಪಳ ಫೆ. ೆ): ಕೊಪ್ಪಳ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಕಿಮ್ಸ್)ಯ ವಿವಿಧ ಬೋಧಕ ಮತ್ತು ಬೋಧಕೇತರ ಹುದ್ದೆಗಳ ನೇಮಕಾತಿ ಅಧಿಸೂಚನೆಯನ್ನು ರದ್ದು ಪಡಿಸಲಾಗಿದೆ.
ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಕಿಮ್ಸ್) ಯಲ್ಲಿ ಅವಶ್ಯವಿರುವ ವಿವಿಧ ಬೋಧಕ ಮತ್ತು ಬೋಧಕೇತರ ಹುದ್ದೆಗಳನ್ನು ನೇರ ಸಂದರ್ಶನದ ಮುಖಾಂತರ ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆಯನ್ನು 2017ರ ನವೆಂಬರ್. 17 ರಂದು ಪ್ರಕಟಿಸಿ, ನ. 29 ರಂದು ನೇರ ಸಂದರ್ಶನವನ್ನು ಜರುಗಿಸಲಾಗಿತ್ತು.
ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು 2018ರ ಜುಲೈ. 02 ರಂದು ಪ್ರಕಟಿಸಿದ್ದು, ತಾತ್ಕಾಲಿಕ ಆಯ್ಕೆ ಪಟ್ಟಿಗೆ ಒಟ್ಟು ಹನ್ನೊಂದು ಆಕ್ಷೇಪಣೆಗಳನ್ನು ಸ್ವೀಕರಿಸಲಾಗಿದೆ. ಪರಿಶೀಲನೆಯ ನಂತರ ಅಧಿಸೂಚನೆಯಲ್ಲಿ ಸೂಚಿಸಲಾದ ಮತ್ತು ಆಯ್ಕೆ ಪಟ್ಟಿಯಲ್ಲಿ ಮೀಸಲಾತಿ ಮತ್ತು ರೋಸ್ಟರ್ ಬಿಂದುಗಳಲ್ಲಿ ಅಸಹಜತೆಗಳನ್ನು ಪರಿಗಣಿಸಿ ಸರ್ಕಾರವು ಈ ನೇರ ಸಂದರ್ಶನದ ಸಂಪೂರ್ಣ ಪ್ರಕ್ರೀಯೇಯನ್ನು ರದ್ದುಪಡಿಸಿ, ಹೊಸದಾಗಿ ನೇಮಕಾತಿ ಪ್ರಾರಂಭಿಸಲು 2019ರ ಜನವರಿ. 04 ರಂದು ಆದೇಶಿಸಿದೆ. ಕಾರಣ ಕೊಪ್ಪಳ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ವಿವಿಧ ಬೋಧಕ ಮತ್ತು ಬೋಧಕೇತರ ಹುದ್ದೆಗಳ ನೇರ ಸಂದರ್ಶನದ ಮುಖಾಂತರ ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆಯನ್ನು ಮತ್ತು ಅಧಿಸೂಚನೆಯ ಮೂಲಕ ಮಾಡಿರುವ ಎಲ್ಲಾ ತಾತ್ಕಾಲಿಕ ವೃಂದದ ನೇಮಕಾತಿಗಳನ್ನು ರದ್ದುಪಡಿಸಲಾಗಿದೆ ಎಂದು ಕೊಪ್ಪಳ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ನಿರ್ದೇಶಕರು ತಿಳಿಸಿದ್ದಾರೆ.