ಮಾವು ಮೇಳ : ರೈತರಿಂದ ನೇರ ಗ್ರಾಹಕರಿಗೆ ಉತ್ತಮ ಗುಣಮಟ್ಟದ ನೈಸರ್ಗಿಕ ಹಣ್ಣು

ಕೊಪ್ಪಳ ಮೇ. : ರೈತರಿಂದ ನೇರವಾಗಿ ಗ್ರಾಹಕರಿಗೆ ಉತ್ತಮ ಗುಣಮಟ್ಟದ ನೈಸರ್ಗಿಕವಾಗಿ ಮಾಗಿಸಿದ ಮಾವಿನ ಹಣ್ಣುಗಳನ್ನು ಯೋಗ್ಯ ಬೆಲೆಗೆ ತಲುಪಿಸುವ ಉದ್ದೆÃಶದಿಂದ ಪ್ರತಿ ವರ್ಷದಂತೆ ಈ ವರ್ಷವೂ ಕೊಪ್ಪಳ ಜಿಲ್ಲೆಯಲ್ಲಿ ಮಾವು ಪ್ರದರ್ಶನ ಹಾಗೂ ಮಾರಾಟ ಮೇಳವನ್ನು ಆಯೋಜಿಸಲಾಗಿದೆ ಎಂದು ಕೊಪ್ಪಳ ತೋಟಗಾರಿಕೆ ಇಲಾಖಾ ಉಪನಿರ್ದೇಶಕ ಕೃಷ್ಣ ಉಕ್ಕುಂದರವರು ತಿಳಿಸಿದ್ದಾರೆ.
ಮಾವು ಪ್ರದರ್ಶನ ಮೇಳವನ್ನು ಕೊಪ್ಪಳ ತೋಟಗಾರಿಕೆ (ಜಿಪಂ) ಇಲಾಖೆ ಮತ್ತು ಬೆಂಗಳೂರು ಕರ್ನಾಟಕ ರಾಜ್ಯ ಮಾವು ಅಭಿವೃದ್ಧಿ ಮತ್ತು ಮಾರಾಟ ಮಂಡಳಿ ನಿಯಮಿತ(ನಿ), ಇವರ ಸಂಯುಕ್ತಾಶ್ರಯದಲ್ಲಿ ಮೇ. 08 ರಿಂದ 15 ರವರೆಗೆ ಕೊಪ್ಪಳ ನಗರದ ಎಲ್‌ಐಸಿ ಆಫಿಸ್ ಎದುರುಗಡೆ ಇರುವ ತೋಟಗಾರಿಕೆ ಇಲಾಖೆ ಕಛೇರಿ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಮೇಳದ ಮೂಲ ಉದ್ದೆÃಶ;
ರೈತರಿಂದ ಗ್ರಾಹಕರಿಗೆ ನೇರವಾಗಿ ಉತ್ತಮ ಗುಣಮಟ್ಟದ ಮತ್ತು ನೈಸರ್ಗಿಕವಾಗಿ ಮಾಗಿಸಿದ ಮಾವಿನ ಹಣ್ಣನ್ನು ತಲುಪಿಸುವುದು. ಕ್ಯಾಲ್ಸಿಯಂ ಕಾರ್ಬೈಡ್‌ನಂತಹ ಹಾನಿಕಾರಕ ರಾಸಾಯನಿಕಗಳನ್ನು ಬಳಸದೇ ಇರುವ ಮತ್ತು ನೈಸರ್ಗಿಕವಾಗಿ ಮಾಗಿಸಿದ ಹಣ್ಣುಗಳನ್ನೆÃ ಮಾರಾಟಕ್ಕೆ ಇಡಲಾಗುವುದು. ರೈತರಿಗೆ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸುವುದು ಮತ್ತು ವೈಜ್ಞಾನಿಕವಾಗಿ ಹಣ್ಣು ಮಾಗಿಸುವ ಬಗ್ಗೆ ಮಾಹಿತಿ ನೀಡಲಾಗುವುದು. ಗ್ರಾಹಕರಿಗೆ ಯೋಗ್ಯ ಬೆಲೆಗೆ ಗುಣಮಟ್ಟದ ಮಾವಿನ ಹಣ್ಣುಗಳು ಯಾವುದೇ ಮಧ್ಯವರ್ತಿಗಳಿಲ್ಲದೇ ಮಾರಾಟಕ್ಕೆ ಲಭ್ಯ. ಕೊಪ್ಪಳ ಜಿಲ್ಲೆಯಲ್ಲಿ ಹಾಗೂ ಕರ್ನಾಟಕ ರಾಜ್ಯದಲ್ಲಿ ಬೆಳೆಯುವ ಸುಮಾರು 100 ಕ್ಕೂ ಹೆಚ್ಚು ಪ್ರಮುಖ ಮಾವಿನ ತಳಿಗಳ ಪ್ರದರ್ಶನ. ಮುಂಬರುವ ದಿನಗಳಲ್ಲಿ ಹೆಚ್ಚಿನ ರೈತರು ಮಾವಿನ ಬೆಳೆ ಬೆಳೆಯಲು ಪ್ರೊÃತ್ಸಾಹ. ರಾಸಾಯನಿಕಗಳನ್ನು ಬಳಸಿ ಹಣ್ಣು ಮಾಗಿಸುವಿಕೆಯಿಂದಾಗುವ ದುಷ್ಪರಿಣಾಮ ಹಾಗೂ ನೈಸರ್ಗಿಕವಾಗಿ ಹಣ್ಣು ಮಾಗಿಸುವುದರಿಂದ ಆಗುವ ಪ್ರಯೋಜನಗಳ ಬಗ್ಗೆ ರೈತರಿಗೆ ಗ್ರಾಹಕರಿಗೆ ಹಾಗೂ ಸಾರ್ವಜನಿಕರಿಗೂ ಅರಿವು ಮೂಡಿಸುವುದಾಗಿದೆ. ಮಾವಿನ ಹಣ್ಣಿನಲ್ಲಿರುವ ಪೋಷಕಾಂಶಗಳ ಲಭ್ಯತೆ ಬಗ್ಗೆ ಸಾರ್ವಜನಿಕರಲ್ಲಿ ತಿಳುವಳಿಕೆ ಮೂಡಿಸುವುದು. ಮಾವಿನ ಹಣ್ಣನ್ನು ಸೇವಿಸುವುದರಿಂದಾಗುವ ಪ್ರಯೋಜನಗಳ ಬಗ್ಗೆಯೂ ಸಹ ಎಲ್ಲರಿಗೆ ಮಾಹಿತಿ ರವಾನೆ ಮತ್ತು ರೈತರೇ ನೇರವಾಗಿ ಮಾರಾಟ ಮಾಡುವುದರಿಂದ ಅವರು ಹೆಚ್ಚಿನ ಲಾಭ ಪಡೆಯಬಹುದಾಗಿದೆ.
ಈ ವರ್ಷದ ಮೇಳದ ವಿಶೇಷತೆ ಎಂದರೆ ಮಾವಿನ ಹಣ್ಣಿನ ಸಂಸ್ಕರಿಸಿದ ಉತ್ಪನ್ನಗಳಾದ ಚಟ್ನಿ, ಉಪ್ಪಿನಕಾಯಿ, ಮಾವಿನ ರಸ ಹಾಗೂ ಇತರೆ ಉತ್ಪನ್ನಗಳ ಬಗ್ಗೆ ರೈತರಿಗೂ ಹಾಗೂ ಸಾರ್ವಜನಿಕರಿಗೂ ಮಾಹಿತಿ ನೀಡುವುದು. ರೈತರಿಗೆ ಬೆಲೆ ಕುಸಿತದಿಂದಾಗುವ ನಷ್ಟದಿಂದ ತಪ್ಪಿಸಿಕೊಳ್ಳಲು ಮಾವಿನ ಹಣ್ಣಿನ ಸಂಸ್ಕರಣೆ ಹಾಗೂ ಮೌಲ್ಯವರ್ಧನೆ ಬಗ್ಗೆ ಹೆಚ್ಚಿನ ಒತ್ತು ಕೊಡಲಾಗುವುದು. ಈ ಬಗ್ಗೆ ವಿಶೇಷ ತಾಂತ್ರಿಕ ಕಾರ್ಯಾಗಾರವನ್ನು ಇದೇ ತಿಂಗಳ ಅಂದರೆ ಮೇ. 14 ನೇ ತಾರೀಖು ಮಂಗಳವಾರದಂದು ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ. ಮಾವು ಮಂಡಳಿಯಿಂದ ರೈತರಿಗೆ ದೊರೆಯುವ ಸೌಲಭ್ಯಗಳು/ ಪ್ರಯೋಜನಗಳ ಬಗ್ಗೆ ತಿಳುವಳಿಕೆ ನೀಡುವುದು. ಈಗಾಗಲೇ ಜಿಲ್ಲೆಯ 30 ಕ್ಕೂ ಹೆಚ್ಚಿನ ರೈತರು ತಮ್ಮ ಹೆಸರನ್ನು ಈ ಮೇಳಕ್ಕೆ ನೋಂದಾಯಿಸಿದ್ದು, ಮಾವು ಬೆಳೆಗಾರರು ತಮ್ಮ ಉತ್ಪನ್ನಗಳನ್ನು ಮಾರಟ ಮಾಡಲು ಕೊಪ್ಪಳ ತೋಟಗಾರಿಕೆ ಇಲಾಖೆ (ಜಿಪಂ)ರವರ ಆವರಣದಲ್ಲಿ ಅವಕಾಶ ಕಲ್ಪಿಸಲಾಗಿದೆ.
ಜಿಲ್ಲೆಯಲ್ಲಿ ಬೆಳೆಯಲಾಗುತ್ತಿರುವ ಪ್ರಮುಖ ಮಾವಿನ ತಳಿಗಳಾದ ಬೇನೆಷಾನ್, ಕೇಸರ್, ದಶಹರಿ, ಆಪೂಸ್, ಮಲ್ಲಿಕಾ, ರಸಪೂರಿ, ಸುವರ್ಣರೇಖ, ಇಮಾಮ್ ಪಸಂದ್, ಚಿನ್ನರಸಂ, ಪೆದ್ದರಸಂ ಮುಂತಾದ ತಳಿಗಳನ್ನು ರೈತರು ನೇರವಾಗಿ ಗ್ರಾಹಕರಿಗೆ ನೈಸರ್ಗಿಕವಾಗಿ ಮಾಗಿಸಿದ ಮಾವಿನ ಹಣ್ಣುಗಳನ್ನು ಯೋಗ್ಯ ಬೆಲೆಗೆ ಮಾರಾಟಮಾಡಲು ಅವಕಾಶ ಕಲ್ಪಿಸಲಾಗಿದೆ. ಈ ಮಾರಾಟ ಮೇಳದಲ್ಲಿ ಜಿಲ್ಲೆಯ ಮಾವು ಬೆಳೆಗಾರರಲ್ಲದೇ ತೋಟಗಾರಿಕೆ ರೈತ ಉತ್ಪಾದಕರ ಕಂಪನಿಗಳ ರೈತ ಸದಸ್ಯರು ಕೂಡಾ ಭಾಗವಹಿಸಲಿದ್ದು, ಮಾವಿನ ಮೇಳವು ಮೇ 08 ಬುಧವಾರದಿಂದ 08 ದಿನಗಳ ಕಾಲ ಆಯೋಜಿಸಲಾಗಿದ್ದು, ಈ ಮೇಳಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರು ಭಾಗವಹಿಸಿ ಹಣ್ಣಿನ ರಾಜ ಮಾವಿನ ಸವಿಯನ್ನು ಸವಿಯಬೇಕೆಂದು ಕೊರಿದೆ.
ಹೆಚ್ಚಿನ ಮಾಹಿತಿಗಾಗಿ ಕೊಪ್ಪಳ ತೋಟಗಾರಿಕೆ ಉಪ ನಿರ್ದೇಶಕರು (ಜಿ.ಪಂ) ರವರ ಕಛೇರಿ, ದೂ.ಸಂ. 08539-231530 ಅಥವಾ ಕೇಂದ್ರ ಸ್ಥಾನಿಕ ಸಹಾಯಕರು ಮೊ.ಸಂ. 9611888607 ರವರನ್ನು ಮತ್ತು ಆಯಾ ತಾಲ್ಲೂಕಾ ತೋಟಗಾರಿಕೆ ಕಛೇರಿಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Please follow and like us:
error