ಮಾ. ೧೩ ರಂದು ಕೊಪ್ಪಳದಲ್ಲಿ ಮಿನಿ ಉದ್ಯೋಗ ಮೇಳ


ಕೊಪ್ಪಳ ಮಾ.  : ಕೊಪ್ಪಳ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ಮಿನಿ ಉದ್ಯೋಗ ಮೇಳವನ್ನು ಮಾ. ೧೩ ರಂದು ಬೆಳಿಗ್ಗೆ ೧೦-೩೦ ರಿಂದ ಮಧ್ಯಾಹ್ನ ೨-೩೦ ಗಂಟೆಯವರೆಗೆ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಉದ್ಯೋಗ ಮಿನಿಮಯ ಕೇಂದ್ರದಲ್ಲಿ ಆಯೋಜಿಸಲಾಗಿದೆ.
ಮಿನಿ ಉದ್ಯೋಗ ಮೇಳದಲ್ಲಿ ವಿವಿಧ ಕಂಪನಿಗಳಾದ ಸ್ಪಂದನಾ ಸ್ಪೂರ್ತಿ ಫೈನಾನ್ಸಿಯಲ್ ಪ್ರೈ.ಲಿ ಕೊಪ್ಪಳ, ಹೆಚ್‌ಡಿಎಫ್‌ಸಿ ಲೈಫ್ ಲಿ., ಸ್ಪೂರ್ತಿ ಹರ್ಬಲ್ಸ್ ಲಿ. ಬೆಳಗಾವಿ, ಶ್ರೀಸಾಯಿ ಸೇವಾ ಸಂಸ್ಥೆ, ನವಭಾರತ ಫರ್ಟಿಲೈಜರ್‍ಸ್ ಪ್ರೈ.ಲಿ ಹುಬ್ಬಳ್ಳಿ ಹಾಗೂ ಇನ್ನೂ ಹೆಚ್ಚಿನ ಕಂಪನಿಗಳು ಭಾಗವಹಿಸಲಿದ್ದು, ತಮ್ಮಲ್ಲಿ ಖಾಲಿ ಇರುವ ಹುದ್ದೆಗಳನ್ನು ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಿವೆ.
ಹುದ್ದೆ ಭರ್ತಿ ಸಮಯದಲ್ಲಿ ಯಾವುದೇ ಶುಲ್ಕ ಇರುವುದಿಲ್ಲ. ಎಲ್ಲರಿಗೂ ಉಚಿತ ಪ್ರವೇಶವಿದ್ದು, ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಅಥವಾ ಯಾವುದೇ ಪದವಿಧರ ಅಭ್ಯರ್ಥಿಗಳು ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ. ಮಿನಿ ಉದ್ಯೋಗ ಮೇಳದಲ್ಲಿ ಭಾಗವಹಿಸುವ ಅಭ್ಯರ್ಥಿಗಳು ೧೮ ರಿಂದ ೩೫ ವರ್ಷ ವಯೋಮಿತಿಯಲ್ಲಿರಬೇಕು. ಅರ್ಹ ಅಭ್ಯರ್ಥಿಗಳು ತಮ್ಮ ವಿದ್ಯಾರ್ಹತೆಯ ಎಲ್ಲಾ ಪ್ರಮಾಣ ಪತ್ರಗಳು ಮತ್ತು ಕಡ್ಡಾಯವಾಗಿ ಆಧಾರ ಕಾರ್ಡ ಪ್ರತಿ, ೧ ರಿಂದ ೪ ಬಯೋಡಾಟಾ ಹಾಗೂ ಪಾಸ್‌ಪೋರ್ಟ್ ಅಳತೆಯ ಭಾವಚಿತ್ರಗಳೊಂದಿಗೆ ಮಿನಿ ಉದ್ಯೋಗ ಮೇಳದಲ್ಲಿ ಹಾಜರಾಗಬೇಕು.
ಹೆಚ್ಚಿನ ಮಾಹಿತಿಗಾಗಿ ಕೊಪ್ಪಳ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಜಿಲಾಡಳಿತ ಭವನ ಮೊದಲನೇ ಮಹಡಿ, ಕೊಪ್ಪಳ, ಕಛೇರಿ ದೂ.ಸಂ. ೦೮೫೩೯-೨೨೦೮೫೯, ಮೊ.ಸಂ. ೯೮೮೦೯೧೦೯೭೭ ಕ್ಕೆ ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗಾಧಿಕಾರಿ  ತಿಳಿಸಿದ್ದಾರೆ.