ರಾಜ್ಯಕ್ಕೆ ಕೊಪ್ಪಳ ಜಿಲ್ಲೆ ಪ್ರಥಮ ಸ್ಥಾನ : ಜಿಲ್ಲಾಧಿಕಾರಿ ಪಿ. ಸುನೀಲ್ ಕುಮಾರ

“ಪ್ರಧಾನ ಮಂತ್ರಿ ಶ್ರಮ ಯೋಗಿ ಮಾನ್‌ಧನ್ ಯೋಜನೆ” : ೬೬೪ ಜನರ ನೊಂದಣಿ

ಕೊಪ್ಪಳ ಮಾ.   “ಪ್ರಧಾನ ಮಂತ್ರಿ ಶ್ರಮ ಯೋಗಿ ಮಾನ್‌ಧನ್ ಯೋಜನೆ” ಜಿಲ್ಲೆಯಿಂದ ೬೬೪ ಜನರ ನೊಂದಣಿಯಾಗಿದ್ದು, ಈ ಕುರಿತು ರಾಜ್ಯಕ್ಕೆ ಕೊಪ್ಪಳ ಜಿಲ್ಲೆ ಪ್ರಥಮ ಸ್ಥಾನಹೊಂದಿದೆ ಎಂದು ಜಿಲ್ಲಾಧಿಕಾರಿ ಪಿ. ಸುನೀಲ್ ಕುಮಾರ ಅವರು ಹೇಳಿದರು.
ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕಾರ್ಮಿಕ ಇಲಾಖೆ, ಪಿ.ಎಫ್., ಇ.ಎಸ್.ಐ. ಇಲಾಖೆ, ಇವರ ಸಹಭಾಗಿತ್ವದಲ್ಲಿ ಮಂಗಳವಾರದಂದು ಜಿಲ್ಲಾ ಮಟ್ಟದಲ್ಲಿ “ಪ್ರಧಾನ ಮಂತ್ರಿ ಶ್ರಮ ಯೋಗಿ ಮಾನ್‌ಧನ್ ಯೋಜನೆ” ಚಾಲನೆ ಕಾರ್ಯಕ್ರಮದ ಉದ್ಘಾಟನೆ ನೆರೆವೇರಿಸಿ ಅವರು ಮಾತನಾಡಿದರು.
“ಪ್ರಧಾನ ಮಂತ್ರಿ ಶ್ರಮ ಯೋಗಿ ಮಾನ್‌ಧನ್ ಯೋಜನೆ”ಯನ್ನು ಜಿಲ್ಲೆಯಲ್ಲಿನ ಜನರು ಇದರ ಸದುಪಯೋಗ ಪಡಿಸಿಕೊಳ್ಳಬೇಕು. ಇಲ್ಲಿಯವರೆಗೂ ಕೊಪ್ಪಳ ಜಿಲ್ಲೆಯಲ್ಲಿ ಒಟ್ಟು ೬೬೪ ಜನರಿಂದ ನೊಂದಣಿಯಾಗಿದ್ದು, ನೋಂದಣಿ ಪ್ರಕ್ರಿಯೆಯಲ್ಲಿ ರಾಜ್ಯಕ್ಕೆ ಜಿಲ್ಲೆಯು ಪ್ರಥಮ ಸ್ಥಾನದಲ್ಲಿದೆ. ರಾಜ್ಯದಲ್ಲಿ ಒಟ್ಟು ೧೦,೩೦೦ ಜನರು ನೊಂದಣಿ ಹೊಂದಿದ್ದಾರೆ. ಅಲ್ಲದೇ ಇನ್ನೂ ಹೆಚ್ಚಿನ ಸಂಖ್ಯೆಯ ಜನರು ಈ ನೊಂದಣಿ ಮಾಡಿಕೊಂಡು ಯೋಜನೆಯನ್ನು ಸದುಪಯೋಗ ಪಡಿಸಿಕೊಳ್ಳುವಂತೆ ಜಿಲ್ಲಾಧಿಕಾರಿ ಪಿ. ಸುನೀಲ್ ಕುಮಾರ ಅವರು ಹೇಳಿದರು.
ಕಾರ್ಯಕ್ರಮದಲ್ಲಿ ಕೊಪ್ಪಳ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆರ್.ಎಸ್. ಪೆದ್ದಪ್ಪಯ್ಯ, ಬಳ್ಳಾರಿ ಭವಿಷ್ಯ ನಿದಿ ಇಲಾಖೆಯ ಘೋಷ್ ಸಹಾಯಕ ಆಯುಕ್ತ ತಪಸ್ ಕುಮಾರ್, ಇ.ಎಸ್.ಐ. ಇಲಾಖೆಯ ರಾಜು ದೇವಾಡಿಗ, ಜಿಲ್ಲಾ ಕಾರ್ಮಿಕ ನಿರೀಕ್ಷಕ ಹೊನ್ನಪ್ಪ, ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಶಶಿಧರ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ನೊಂದಣಿಯಾದ ಫಲಾನುಭವಿಗಳಿಗೆ “ಪ್ರಧಾನ ಮಂತ್ರಿ ಶ್ರಮ ಯೋಗಿ ಮಾನ್‌ಧನ್ ಯೋಜನೆ”ಯ ಸ್ಮಾರ್ಟ್ ಕಾರ್ಡ್‌ಗಳನ್ನು ಅರ್ಹ ಫಲಾನುಭವಿಗಳಿಗೆ ಇದೇ ಸಂದರ್ಭದಲ್ಲಿ ವಿತರಿಸಲಾಯಿತು.