ರೈತರು ದ್ರಾಕ್ಷಿ, ದಾಳಿಂಬೆ ಮೇಳದ ಸದುಪಯೋಗ ಪಡಿಸಿಕೊಳ್ಳಿ : ಕೆ. ರಾಘವೇಂದ್ರ ಹಿಟ್ನಾಳ್

ಕೊಪ್ಪಳ ಫೆ. : ದ್ರಾಕ್ಷಿ ಮತ್ತು ದಾಳಿಂಬೆ ಮೇಳದ ಸದಪಯೋಗವನ್ನು ಜಿಲ್ಲೆಯ ಎಲ್ಲಾ ರೈತರು ಪಡೆದುಕೊಳ್ಳಬೇಕು ಎಂದು ಕೊಪ್ಪಳದ ಶಾಸಕ ಕೆ. ರಾಘವೇಂದ್ರ ಹಿಟ್ನಾಳ್ ಅವರು ಹೇಳಿದರು.


ನಗರದ ತೋಟಗಾರಿಕೆ ಕಚೇರಿಯ ಆವರಣದಲ್ಲಿ ಆಯೋಜಿಸಿದಲಾದ ದ್ರಾಕ್ಷಿ ಮತ್ತು ದಾಳಿಂಬೆ ಮೇಳವನ್ನು ಉದ್ಘಾಟಿಸಿ ಮಾತನಾಡಿದರು.
ದ್ರಾಕ್ಷಿ ಮತ್ತು ದಾಳಿಂಬೆ ಮೇಳದಿಂದ ಜಿಲ್ಲೆಯ ರೈತರಿಗೆ ಸಾಕಷ್ಟು ಅನುಕೂಲವಾಗಲಿದೆ. ರೈತರು ರಾಸಾಯನಿಕ ಗೊಬ್ಬರವನ್ನು ಮಿತವಾಗಿ ಬಳಸಬೇಕು, ಸಾವಯವ ಗೊಬ್ಬರದಿಂದ ಹೆಚ್ಚು ಹೆಚ್ಚು ಬೆಳೆ ಬೆಳೆಯಲು ಮುಂದಾಗಬೇಕು. ಜಿಲ್ಲೆಯಲ್ಲಿ ಸತತ ಬರಗಾಲ ಆವರಿಸಿದ್ದು ರೈತರಿಗೆ ಬೆಳೆನ್ನು ಬೆಳೆಯಲು ಆಗುತ್ತಿಲ್ಲ, ಅಲ್ಲದೇ ರೈತರು ಬೆಳೆದ ಬೆಳೆಗೆ ಮಾರುಕಟ್ಟೆಯಲ್ಲಿ ಸೂಕ್ತ ಬೆಲೆಯು ದೊರಕುತ್ತಿಲ್ಲ. ಈ ನಿಟ್ಟಿನಲ್ಲಿ ತೋಟಗಾರಿಕೆ ಇಲಾಖೆ ಪ್ರತಿ ವರ್ಷ ದ್ರಾಕ್ಷಿ ಮೇಳವನ್ನು ಆಯೋಜಿಸಿ ರೈತರಿಗೆ ಮುಕ್ತ ಮಾರುಕಟ್ಟೆಗೆ ಅವಕಾಶ ಕಲ್ಪಿಸುತ್ತಿರುವುದು ಸಂತಸದ ಸಂಗತಿ. ಉತ್ತಮ ಗುಣಮಟ್ಟದ ಬೆಳೆಗಳನ್ನು ರೈತರಿಂದ ನೆರವಾಗಿ ಗ್ರಾಹಕರಿಗೆ ತಲುಪಿಸುವುದು. ಜಿಲ್ಲೆಯ ಎಲ್ಲಾ ದ್ರಾಕ್ಷಿ ಮತ್ತು ದಾಳಿಬೆ ಬೆಳೆಗಾರು ಈ ಮೇಳದ ಸದುಪಯೋಗವನ್ನು ಪಡೆದುಕೊಳ್ಳಿ ಎಂದು ಹೇಳಿದರು.
ದ್ರಾಕ್ಷಿ ಮತ್ತು ದಾಳಿಂಬೆ ಮೇಳದಲ್ಲಿ ಜಿ.ಪಂ ಅಧ್ಯಕ್ಷ ಹೆಚ್. ವಿಶ್ವನಾಥ ರಡ್ಡಿ, ನಗರಸಭೆ ಮಾಜಿ ಅಧ್ಯಕ್ಷ ಮಹೇಂದ್ರ ಚೂಪ್ರಾ, ಕೊಪ್ಪಳ ತೋಟಗಾರಿಕೆ ಉಪನಿರ್ದೇಶಕ ಕೃಷ್ಣ ಸಿ. ಉಕ್ಕುಂದ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಇದೇ ಸಂದರ್ಭದಲ್ಲಿ ಉಪಸ್ಥಿತರಿದ್ದರು.