ಜು.24 ರಂದು ಐಎಎಸ್, ಕೆಎಎಸ್ ತರಬೇತಿಗಾಗಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಪರೀಕ್ಷೆ….!

kasಕೊಪ್ಪಳ  ಜು -18 (ಕ ವಾ) : ಸಮಾಜ ಕಲ್ಯಾಣ ಇಲಖೆ ಮತ್ತು ಹಿಂದುಳಿದ ವರ್ಗಗಳ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಐಎಎಸ್, ಕೆಎಎಸ್ ಹಾಗೂ ಬ್ಯಾಂಕಿಂಗ್ ಸ್ಪರ್ದಾತ್ಮಕ ಪರೀಕ್ಷಾ ಅಭ್ಯರ್ಥಿಗಳಿಗೆ ನೀಡಲು ಉದ್ದೇಶಿಸಲಾಗಿರುವ ಪರೀಕ್ಷಾ ಪೂರ್ವ ತರಬೇತಿಗಾಗಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಜು.24 ರಂದು ಕೊಪ್ಪಳದಲ್ಲಿ ಸ್ಪರ್ದಾತ್ಮಕ ಪರೀಕ್ಷೆ ಹಮ್ಮಿಕೊಳ್ಳಲಾಗಿದೆ.

ಕೊಪ್ಪಳದ 09 ಪರೀಕ್ಷಾ ಕೇಂದ್ರಗಳ ವಿವರ ಇಂತಿದೆ. ಎಸ್‍ಎಫ್‍ಎಸ್ ಸ್ಕೂಲ್ , ಬಾಲಕರ ಸ.ಪ.ಪೂ ಕಾಲೇಜು, ಬಾಲಕಿಯರ ಸ.ಪ.ಪೂ ಕಾಲೇಜು, ಸರಕಾರಿ ಪ್ರಥಮ ದರ್ಜೆ ಕಾಲೇಜು, ಗವಿಸಿದ್ದೇಶ್ವರ ಪ.ಪೂ ಕಾಲೇಜು, ಗವಿಸಿದ್ದೇಶ್ವರ ಪ್ರಥಮ ದರ್ಜೆ ಪದವಿ ಕಾಲೇಜು, ಬಿ.ಎನ್.ಆರ್.ಕೆ ಪ.ಪೂ ಕಾಲೇಜು, ಹಾಗೂ ಗುಳಗಣ್ಣವರ್ ಪಾಲಿಟೆಕ್ನಿಕ್ ಕಾಲೇಜು, ಸ್ಪರ್ಧಾತ್ಮಕ ಪರೀಕ್ಷೆಯು ನಿಗದಿತ ದಿನದಂದು ಬೆಳಗ್ಗೆ 10 ರಿಂದ 12 ಗಂಟೆಯವರೆಗೆ ಹಾಗೂ ಮ.2 ರಿಂದ 4 ಗಂಟೆಯವರೆಗೆ ನಡೆಯಲಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ  ತಿಳಿಸಿದೆ.

Please follow and like us:
error