ಜಿಲ್ಲೆಯ ಸಂಸದರು, ಶಾಸಕರು ಹಾಗೂ ಉಸ್ತುವಾರಿ ಮಂತ್ರಿಗಳು ನೀವು ಯಾರ ಪರ?

ಗಂಗಾವತಿ ೦೬: ಇಂದು ದಿನಾಂಕ: ೦೫.೧೦.೨೦೧೭ ರಂದು ಪ್ರಗತಿಪರ ಸಂಘಟನೆಗಳ ಒಕ್ಕೂಟ ಕೊಪ್ಪಳ ಮತ್ತು ಭೂಮಿ ವಂಚಿತರ ಹೋರಾಟ ಸಮಿತಿ ಗಂಗಾವತಿ ಜಂಟಿ ಸಭೆಯು ನಡೆಯಿತು. ಈ ಸಭೆಯಲ್ಲಿ ಅನೇಕ ದಲಿತ ಪರ ಸಂಘಟನೆಗಳ ಮುಖಂಡರು, ಎಡಪಂಥೀಯ, ರೈತ ಸಂಘಟನೆಯ ಮುಖಂಡರು ಭಾಗವಹಿಸಿದ್ದರು. ಕನಕಗಿರಿಯ ತಿಪ್ಪನಾಳ ಕೆರೆ ೯೬ ಎಕರೆ ಭೂಮಿಯಲ್ಲಿ ಬೆಳೆದ ಬೆಳೆಯನ್ನು ನಾಶಗೊಳಿಸಿದ ಜಿಲ್ಲಾಡಳಿತದ ವಿರುದ್ಧ ತೀವ್ರತರವಾದ ಹೋರಾಟ ನಡೆಸಲು ತೀರ್ಮಾನಿಸಲಾಯಿತು. ಭೂಮಿ ಕಳೆದುಕೊಂಡ ದಲಿತ ಮಹಿಳೆಯರು ಕೊಪ್ಪಳ ಜಿಲ್ಲಾಧಿಕಾರಿಗಳ ಕಛೇರಿ ಮುಂದೆ ಹಗಲು-ರಾತ್ರಿ ಮಳೆ ಚಳೆಯಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ. ಜಿಲ್ಲೆಯ ಯಾವೊಬ್ಬ ಶಾಸಕರು, ಸಂಸದರು, ಮಂತ್ರಿಗಳು ಈ ದಲಿತರ ಸಮಸ್ಯೆಗೆ ಸ್ಪಂದಿಸಿರುವುದಿಲ್ಲ. ಈ ಕುರಿತು ಸಭೆಯಲ್ಲಿ ಆಕ್ರೋಶ ವ್ಯಕ್ತವಾಯಿತು. ಈ ಹಿನ್ನೆಲೆಯಲ್ಲಿ “ಮಂತ್ರಿ, ಶಾಸಕರೇ” ನೀವು ಯಾರ ಪರ? ಎನ್ನುವ ಘೋಷಣೆಯೊಂದಿಗೆ ಹೋರಾಟ ರೂಪಿಸಲು ಸಲಹೆಗಳು ವ್ಯಕ್ತವಾಗಿವೆ. ಸಭೆಯಲ್ಲಿ ಭಾಗವಹಿಸಿದ ಅನೇಕ…

Read More