ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ : ಮೂಲ ದಾಖಲೆ ಪರಿಶೀಲನೆಗೆ ಹಾಜರಾಗಲು ಸೂಚನೆ

ಕೊಪ್ಪಳ ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2016-17ನೇ ಸಾಲಿನಲ್ಲಿ ಶೈಕ್ಷಣಿಕ ವರ್ಷದಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾದ ಮೆಟ್ರಿಕ್ ನಂತರದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನಕ್ಕಾಗಿ ಪ್ರಸಕ್ತ ಸಾಲಿನಲ್ಲಿ ಅರ್ಜಿ ಆಹ್ವಾನಿಸಲಾಗಿದ್ದು, ಮೂಲದಾಖಲೆಗಳನ್ನು ಪರಿಶೀಲಿಸಿಕೊಳ್ಳಲು ಇಲಾಖೆ ಉಪನಿರ್ದೇಶಕರು ಸೂಚನೆ ನೀಡಿದ್ದಾರೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳು ವೆಬ್‍ಸೈಟ್ ತಿತಿತಿ.ಞಚಿಡಿ.ಟಿiಛಿ.iಟಿ ನಲ್ಲಿ ಪ್ರೋತ್ಸಾಹಧನಕ್ಕಾಗಿ ಅರ್ಜಿ ಸಲ್ಲಿಸಿದ್ದು, ಅದರನ್ವಯ ಮೂಲ ದಾಖಲೆಗಳನ್ನು ಪರಿಶೀಲನೆಗೆ ಸಲ್ಲಿಸದೇ ಇರುವ ಅಭ್ಯರ್ಥಿಗಳು ನವೆಂಬರ್. 04 ಮತ್ತು 05 ರಂದು ಕಡ್ಡಾಯವಾಗಿ ಎಲ್ಲಾ ಮೂಲ ಅಂಕಪಟ್ಟಿಗಳನ್ನು ಮತ್ತು ಅರ್ಜಿಯಲ್ಲಿ ನಮೂದಿಸಿದಂತಹ ವಿವರದ ಎಲ್ಲಾ ಮೂಲ ದಾಖಲೆಗಳನ್ನು ಉಪನಿರ್ದೇಶಕರ ಕಛೇರಿ ಸಮಾಜ ಕಲ್ಯಾಣ ಇಲಾಖೆ, ಕೊಪ್ಪಳ ಇಲ್ಲಿ ಪರಿಶೀಲನೆಗೆ ಒದಗಿಸಿ ಪರಿಶೀಲನೆ ನಂತರ ದೃಢಿಕೃತ ಪ್ರತಿಗಳನ್ನು ಮಾತ್ರ ಸಲ್ಲಿಸಿ, ಮೂಲ ದಾಖಲೆಗಳನ್ನು ಪುನಃ ಹಿಂಪಡೆದುಕೊಂಡು ಹೋಗಬಹುದು. ಹೆಚ್ಚಿನ ಮಾಹಿತಿಗಾಗಿ…

Read More