ಸ್ವಾಭಿಮಾನಕ್ಕೆ ಮತ್ತೊಂದು ಹೆಸರೇ ಟಿಪ್ಪು ಸುಲ್ತಾನ್- ರಾಘವೇಂದ್ರ ಹಿಟ್ನಾಳ್

ಅಪ್ರತಿಮ ದೇಶಭಕ್ತ ಹಾಗೂ ಸ್ವಾಭಿಮಾನಕ್ಕೆ ಮತ್ತೊಂದು ಹೆಸರೇ ಟಿಪ್ಪು ಸುಲ್ತಾನ್, ಟೀಕೆ ವ್ಯಕ್ತಪಡಿಸುವವರು ಇತಿಹಾಸವನ್ನು ಸರಿಯಾಗಿ ತಿಳಿದುಕೊಳ್ಳಲಿ ಎಂಬುದಾಗಿ ಕೊಪ್ಪಳ ಶಾಸಕ ಕೆ. ರಾಘವೇಂದ್ರ ಹಿಟ್ನಾಳ್ ಅವರು ಹೇಳಿದರು. ಜಿಲ್ಲಾಡಳಿತದ ವತಿಯಿಂದ ನಗರದ ಸಾಹಿತ್ಯ ಭವನದಲ್ಲಿ ಸೋಮವಾರದಂದು ಏರ್ಪಡಿಸಲಾಗಿದ್ದ ಹಜರತ್ ಟಿಪ್ಪು ಸುಲ್ತಾನ್ ಜಯಂತಿ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.  ಹಜರತ್ ಟಿಪ್ಪು ಸುಲ್ತಾನ್ ಅಪ್ರತಿಮ ಸ್ವಾತಂತ್ರ್ಯ ಹೋರಾಟಗಾರ, ದೇಶಭಕ್ತ ಹಾಗೂ ಸರ್ವಧರ್ಮ ರಕ್ಷಕರಾಗಿದ್ದರು. ಇಂತಹ ಮಹಾನ್ ಪುರುಷ ಹಜರತ್ ಟಿಪ್ಪು ಸುಲ್ತಾನ್ ಜಯಂತಿಯನ್ನು ಸರ್ಕಾರದ ವತಿಯಿಂದ ಆಚರಿಸಲು ನಿರ್ಧಾರ ಕೈಗೊಂಡ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಅಭಿನಂದನಾರ್ಹರು. ಟಿಪ್ಪು ಸುಲ್ತಾನ್ ಜಯಂತಿ ಆಚರಣೆ ಕುರಿತಂತೆ ಟೀಕಿಸುವವರು, ಇತಿಹಾಸವನ್ನು ಸರಿಯಾಗಿ ತಿಳಿದುಕೊಳ್ಳಬೇಕಿದೆ. ಕೃಷಿ, ವಿಜ್ಞಾನ ಮುಂತಾದ ಕ್ಷೇತ್ರಗಳಲ್ಲಿ ಹೊಸ ಹೊಸ ತಂತ್ರಜ್ಞಾನಗಳನ್ನು ಆಗಿನ ಕಾಲದಲ್ಲೇ ಟಿಪ್ಪು ಸುಲ್ತಾನ್ ಅಳವಡಿಸಿದ್ದರು. ಮಕ್ಕಳನ್ನು ಒತ್ತೆ ಇಡಲು ಬಯಸುತ್ತೇನೆಯೇ ಹೊರತು, ಗುಲಾಮರಂತೆ ಬಾಳಲಾರೆ…

Read More