ವರದಿಗಾರನ ಕೊಲೆಗೆ ಸುಪಾರಿ : ರವಿ ಬೆಳಗೆರೆ ಬಂಧನ

ವರದಿಗಾರನ ಕೊಲೆಗೆ ಸುಪಾರಿ : ಪತ್ರಕರ್ತ ರವಿ ಬೆಳಗೆರೆ ಬಂಧನ ಕುರಿತು ಪೊಲೀಸರು ನೀಡಿದ ಆಘಾತಕಾರಿ ಮಾಹಿತಿ ಇಲ್ಲಿದೆ ಬೆಂಗಳೂರು, ಡಿ.8: ಕೊಲೆಗೆ ಸುಪಾರಿ ಕೊಟ್ಟ ಆರೋಪದ ಮೇಲೆ ಪತ್ರಕರ್ತ ರವಿ ಬೆಳಗೆರೆಯನ್ನು ನಗರದ ಪದ್ಮನಾಭನಗರದ ನಿವಾಸದಲ್ಲಿ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರು ಪೊಲೀಸರು ನೀಡಿದ ಪತ್ರಿಕಾ ಪ್ರಕಟಣೆ ಹೀಗಿದೆ:- ಡಿ. 3 ರಂದು ಬೆಂಗಳೂರು ನಗರ ಸಿಸಿಬಿ ಪೊಲೀಸ್ ಅಧಿಕಾರಿಗಳು ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯ ಸರಹದ್ದಿನಲ್ಲಿ ನಾಡ ಪಿಸ್ತೂಲ್ ಮಾರಾಟ ಮಾಡಲು ಯತ್ನಿಸುತ್ತಿದ್ದ ತಾಹೀರ್ ಹುಸೇನ್ ಯಾನೆ ಅನೂಪ್ ಗೌಡ ಎಂಬಾತನನ್ನು ಬಂಧಿಸಿರುತ್ತಾರೆ. ಈತನನ್ನು ಪೊಲೀಸ್ ಬಂಧನಕ್ಕೆ ಪಡೆದು ಹೆಚ್ಚಿನ ವಿಚಾರಣೆ ಮಾಡಲಾಗಿ ವಿಜಯಪುರ ಜಿಲ್ಲೆಯ ಶಶಿಧರ್ ರಾಮಚಂದ್ರ ಮುಂಡೆವಾಡಿ ಎಂಬಾತನು ಮತ್ತೊಂದು ನಾಡ ಪಿಸ್ತೂಲ್ ಮತ್ತು 2 ಜೀವಂತ ಗುಂಡುಗಳನ್ನು ಪಡೆದುಕೊಂಡಿರುವುದಾಗಿ ಮಾಹಿತಿ ನೀಡುತ್ತಾನೆ. ನಂತರ ಅಕ್ರಮ ಪಿಸ್ತೂಲ್ ಹೊಂದಿದ್ದ ಜಾಲವನ್ನು ಬೆನ್ನಟ್ಟಿದ್ದ…

Read More