ಅಭಿವೃದ್ಧಿಯಲ್ಲಿ ರಾಜಕೀಯ ಭೇದ, ತಾರತಮ್ಯ ಮಾಡಿಲ್ಲ – ಮುಖ್ಯಮಂತ್ರಿ ಸಿದ್ದರಾಮಯ್ಯ

: ಕಳೆದ ನಾಲ್ಕೂವರೆ ವರ್ಷಗಳ ಅವಧಿಯಲ್ಲಿ ರಾಜ್ಯದ ಎಲ್ಲ ಭಾಗಗಳಲ್ಲಿ ಯಾವುದೇ ಪಕ್ಷಬೇಧ ,ಪ್ರಾದೇಶಿಕತೆಯ ತಾರತಮ್ಯ ಮಾಡದೇ ಸಮಾನ ಅಭಿವೃದ್ಧಿ ಕಾರ್ಯ ಕೈಗೊಳ್ಳಲಾಗಿದೆ. ನಮ್ಮ ಪ್ರಣಾಳಿಕೆಯಲ್ಲಿ ನೀಡಿದ್ದ ಎಲ್ಲಾ ಭರವಸೆಗಳನ್ನು ಈಡೇರಿಸಿ ನುಡಿದಂತೆ ನಡೆದಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿಂದು ಸುಮಾರು ೨೩೫ ಕೋಟಿ ರೂಪಾಯಿಗಳ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸುವ ಸಾಧನಾ ಸಂಭ್ರಮ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು. ವಿದ್ಯುಚ್ಛಕ್ತಿ ಬಿಲ್ ಪಾವತಿಸದ ಬಡವರ ಮನೆಗಳ ಹಾಗೂ ನೀರಾವರಿ ಪಂಪಸೆಟ್ ಗಳ ಸಂಪರ್ಕ ಕಡಿತಗೊಳಿಸಲಾಗಿತ್ತು. ಅಧಿಕಾರಕ್ಕೆ ಬಂದ ಕೂಡಲೇ ಅದನ್ನು ಮನ್ನಾ ಮಾಡಿ ಸಂಪರ್ಕ ಕಲ್ಪಿಸಲಾಯಿತು.ವಿವಿಧ ಅಭಿವೃದ್ಧಿ ನಿಗಮ ಗಳಲ್ಲಿ ಬಾಕಿ ಇದ್ದ ಬಡವರ ಸಾಲ ಮನ್ನಾ ಮಾಡಿ ಋಣಮುಕ್ತಗೊಳಿಸಲಾಯಿತು. ಕಳೆದ ನಾಲ್ಕೂವರೆ ವರ್ಷಗಳಲ್ಲಿ ಯಾವುದೇ ಭ್ರಷ್ಟಾಚಾರ, ಹಗರಣಕ್ಕೆ ಆಸ್ಪದ ನೀಡದೇ ದಕ್ಷ ,ಸಮರ್ಥ ಆಡಳಿತವನ್ನು…

Read More