ಪಾಸ್‌ಪೋರ್ಟ್ ಸೇವಾಕೇಂದ್ರ ತೆರೆಯಲು ಮನವಿ-ಸಂಸದ ಸಂಗಣ್ಣ ಕರಡಿ ಒತ್ತಾಯ

| ಸಚಿವೆ ಸುಷ್ಮಾ ಸ್ವರಾಜ್‌ಗೆ ಮನವಿ ಕೊಪ್ಪಳ: ರಾಜ್ಯದಲ್ಲಿ ಅತೀ ಹಿಂದುಳಿದ ಭಾಗವಾಗಿರುವ ಹೈ-ಕ ಭಾಗದ ಜಿಲ್ಲಾ ಕೇಂದ್ರವಾಗಿರುವ ಕೊಪ್ಪಳದಲ್ಲಿ ಪಾಸ್‌ಪೋರ್ಟ್ ಸೇವಾಕೇಂದ್ರ ತೆರೆಯಬೇಕು ಎಂದು ಕೊಪ್ಪಳ ಲೋಕಸಭಾ ಕ್ಷೇತ್ರದ ಸಂಸದ ಸಂಗಣ್ಣ ಕರಡಿಯವರು ವಿದೇಶಾಂಗ ವ್ಯವಹಾರಗಳ ಸಚಿವೆ ಸುಷ್ಮಾ ಸ್ವರಾಜ್ ಅವರಿಗೆ ಮನವಿ ಸಲ್ಲಿಸಿದ್ದಾರೆ. ನವದೆಹಲಿಯ ಸಂಸತ್ ಭವನದಲ್ಲಿ ನಡೆಯುತ್ತಿರುವ ಅಧಿವೇಶನದ ವೇಳೆ ಸಚಿವರನ್ನು ಭೇಟಿ ಮಾಡಿದ ಸಂಸದರು, ಹೈ-ಕ ಭಾಗ ತೀರಾ ಹಿಂದುಳಿದೆ. ಅದಕ್ಕಾಗಿ ೩೭೧ ಜೆ ಅಡಿ ಕೊಪ್ಪಳ ಬರುತ್ತದೆ. ಈ ಭಾಗದ ಸೇವಾ ಕ್ಷೇತ್ರ ಇನ್ನು ಹೆಚ್ಚು ಹೆಚ್ಚು ಅಭಿವೃದ್ಧಿಯಾಗಬೇಕಿದೆ. ಹೀಗಾಗಿ ಸೇವಾ ಕ್ಷೇತ್ರದ ಒಂದು ಭಾಗವಾಗಿರುವ ಪಾಸ್‌ಪೋರ್ಟ್ ಸೇವಾಕೇಂದ್ರ ತೆರೆಯುವ ಅಗತ್ಯತೆ ಹೆಚ್ಚಾಗಿದೆ ಎಂದು ಮನವಿಪತ್ರದಲ್ಲಿ ಮನವರಿಕೆ ಮಾಡಿದ್ದಾರೆ. ರಾಜ್ಯದಲ್ಲಿ ಸಧ್ಯ ೯ ಪಾಸ್‌ಪೋರ್ಟ್ ಸೇವಾ ಕೇಂದ್ರಗಳನ್ನು ತೆರೆಯಲು ಕೇಂದ್ರ ಸರಕಾರ ಮುಂದಾಗಿದೆ. ಈ ನಿಟ್ಟಿನಲ್ಲಿ ಕೊಪ್ಪಳದಲ್ಲೂ ಒಂದು ಕೇಂದ್ರ…

Read More