You are here
Home > 2018 > January > 11 (Page 2)

ಏ.ಜೆ. ಸದಾಶಿವ ಆಯೋಗದ ವರದಿ ಜಾರಿಗೆ ಆಗ್ರಹಿಸಿ ಪ್ರತಿಭಟನೆ

ನ್ಯಾಯಮೂರ್ತಿ ಏ.ಜೆ. ಸದಾಶಿವ ಆಯೋಗದ ವರದಿಯನ್ನು ಜಾರಿಗೊಳಿಸುವಂತೆ ಆಗ್ರಹಿಸಿ ಏ.ಜೆ. ಸದಾಶಿವ ಆಯೋಗ ವರದಿ ಜಾರಿ ಹೋರಾಟ ಸಮಿತಿ ಕಾರ್ಯಕರ್ತರು ಕೊಪ್ಪಳದಲ್ಲಿ ಪ್ರತಿಭಟನೆ ನಡೆಸಿದರು. ಕೊಪ್ಪಳದ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ ಹಾಕಲು ಯತ್ನಿಸಿದ ಪ್ರತಿಭಟನಾಕಾರರನ್ನು ಜಿಲ್ಲಾಡಳಿತ ಭವನದ ದ್ವಾರದಲ್ಲಿಯೇ ಪೊಲೀಸರು ತಡೆದರು. ಜಿಲ್ಲಾಡಳಿತ ಭವನದ ಮುಂದೆ ಅರೆಬೆತ್ತಲೆ ಹಾಗೂ ಉರುಳುಸೇವೆ ಮಾಡುವ ಮೂಲಕ ಪ್ರತಿಭಟನಾಕಾರರು ಆಯೋಗದ ವರದಿಯನ್ನು ಜಾರಿ ಮಾಡದಿದ್ದರೆ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದರು.

Top