ಕೇಂದ್ರದ ಬಜೆಟ್ ಹೈಲೈಟ್ಸ್

2018-19ರ ಬಜೆಟ್‍ನ್ನು ಅಭಿವೃದ್ಧಿ ಕೇಂದ್ರಿತ ಲೆಕ್ಕಾಚಾರವನ್ನಾಗಿ ಮಾಡಲು ಹಣಕಾಸು ಸಚಿವ ಅರುಣ್ ಜೇಟ್ಲಿ ಪ್ರಯತ್ನಿಸಿದ್ದಾರೆ. ಲೋಕಸಭೆಯಲ್ಲಿಂದು ಬಜೆಟ್ ಮಂಡನೆ ಮಾಡಿದ ಜೇಟ್ಲಿ, ಆರೋಗ್ಯ ವಲಯಕ್ಕೆ ಹೆಚ್ಚು ಆದ್ಯತೆ ನೀಡಿದ್ದಾರೆ. ದೇಶದ 10 ಕೋಟಿ ಬಡ ಕುಟುಂಬಗಳ ಆರೋಗ್ಯ ಸುರಕ್ಷತೆಗಾಗಿ ವಿಶೇಷ ಯೋಜನೆಯನ್ನು ಪ್ರಕಟಿಸಿರುವ ಸಚಿವರು ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳಿಗಾಗಿ ₹1200 ಕೋಟಿ ಮೀಸಲಿಟ್ಟಿರುವುದಾಗಿ ಹೇಳಿದ್ದಾರೆ. ರಾಷ್ಟ್ರೀಯ ಆರೋಗ್ಯ ಸುರಕ್ಷತಾ ಯೋಜನೆಯಿಂದಾಗಿ 10 ಕೋಟಿ ಬಡ ಕುಟುಂಬಗಳ 50 ಕೋಟಿ ಜನರಿಗೆ ಆರೋಗ್ಯ ಸುರಕ್ಷತೆ ಸಿಗಲಿದೆ. ಸರ್ಕಾರವು ಪ್ರತಿ ವರ್ಷ ಪ್ರತಿ ಕುಟುಂಬಕ್ಕೆ ₹5 ಲಕ್ಷ ಆರೋಗ್ಯ ವಿಮೆ ನೀಡಲಿದ್ದು, ದೇಶದ 10 ಕೋಟಿ ಬಡ ಕುಟುಂಬಗಳ ಆರೋಗ್ಯ ಸುರಕ್ಷತೆಗಾಗಿ ವಿಶೇಷ ಯೋಜನೆಯನ್ನು ಪ್ರಕಟಿಸಿದ್ದಾರೆ. ಜಿಲ್ಲಾ ಆಸ್ಪತ್ರೆಗಳನ್ನು ವಿಕಸನಗೊಳಿಸಿ ಹೊಸದಾಗಿ 24 ಮೆಡಿಕಲ್ ಕಾಲೇಜುಗಳನ್ನು ಆರಂಭಿಸಲಾಗುವುದು. ಆಯುಷ್ಮಾನ್ ಭಾರತ್ ಯೋಜನೆ ಅಂಗವಾಗಿ ಎರಡು ಹೊಸ ಯೋಜನೆಗಳನ್ನು ಪ್ರಕಟಿಸಲಾಗಿದೆ. ಒಂದೂವರೆ…

Read More