ಫೆ. ೨೦ ರಿಂದ ಸ್ಥಳದಲ್ಲಿಯೇ ತಕ್ಷಣ ಪಡಿತರ ಚೀಟಿ ವಿತರಣಾ ಕಾರ್ಯಕ್ರಮ

ಕೊಪ್ಪಳ ಆಹಾರ ನಾಗರಿಕರ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ವತಿಯಿಂದ ಪಡಿತರ ಚೀಟಿಗಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿರುವವರಿಗೆ ಸ್ಥಳದಲ್ಲಿಯೇ ಪಡಿತರ ಚೀಟಿ ವಿತರಿಸುವ ಕಾರ್ಯಕ್ರಮ ಫೆ. ೨೦ ರಿಂದ ಪ್ರಾರಂಭಿಸಿದ್ದು, ಅರ್ಹರು ಈ ಯೋಜನೆಯ ಸದುಪಯೋಗ ಪಡೆದುಕೊಳ್ಳಬಹುದಾಗಿದೆ. ಆನ್‌ಲೈನ್ ಮೂಲಕ ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಿ, ಪಡಿತರ ಚೀಟಿ ಪಡೆಯಲು ವಿಳಂಬವಾಗುತ್ತಿರುವುದನ್ನು ಗಮನಿಸಿ ತ್ವರಿತವಾಗಿ ಮತ್ತು ಸ್ಥಳದಲ್ಲಿಯೇ ಪಡಿತರ ಚೀಟಿ ನೀಡುವ ಉದ್ದೇಶದಿಂದ ಫೆ. ೨೦ ರಿಂದ ಜಿಲ್ಲೆಯಲ್ಲಿ ತಕ್ಷಣ ಪಡಿತರ ಚೀಟಿ ವಿತರಣಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ತಕ್ಷಣ ಪಡಿತರ ಚೀಟಿ ವಿತರಣಾ ಕಾರ್ಯಕ್ರಮವನ್ನು ಕೊಪ್ಪಳ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತಿಗಳಲ್ಲಿ ನಡೆಸಲಾಗುತ್ತಿದ್ದು, ಈ ಬಗ್ಗೆ ಗ್ರಾ.ಪಂ ವಾರು ವೇಳಾಪಟ್ಟಿ ಪ್ರಕಟಿಸಲಾಗಿದೆ. ಹೊಸ ಪಡಿತರ ಚೀಟಿ ಕೋರಿ ಈಗಾಗಲೇ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿರುವ ನಿಗದಿಪಡಿಸಿರುವ ದಿನಾಂಕದಂದು ತಮ್ಮಲ್ಲಿರುವ ಅರ್ಜಿ ಸ್ವೀಕೃತಿ, ಕುಟುಂಬದ ಆದಾಯ ಪ್ರಮಾಣ…

Read More