ಶಾಸಕ ಇಕ್ಬಾಲ್ ಅನ್ಸಾರಿ ಅವರಿಂದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸಹಕಾರದಿಂದ ಗಂಗಾವತಿ ಕ್ಷೇತ್ರದ ಗ್ರಾಮೀಣದಲ್ಲಿ ಅಭಿವೃದ್ದಿ ಕ್ರಾಂತಿ ಆಗಿದೆ ಎಂದು ಗಂಗಾವತಿ ಶಾಸಕ ಇಕ್ಬಾಲ್ ಅನ್ಸಾರಿ ಹೇಳಿದರು. ಗಂಗಾವತಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕೊಪ್ಪಳ ತಾಲೂಕಿನ ಇಂದರಗಿ ಗ್ರಾಮದಲ್ಲಿ ಒಟ್ಟು 1 ಕೋಟಿ 38 ಲಕ್ಷ ರೂ. ವೆಚ್ಚದಲ್ಲಿ ಸಿಸಿ ರಸ್ತೆ, ರಸ್ತೆ ಡಾಂಬರೀಕರಣ, ಶಾಲಾ ಕೊಠಡಿ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು. ಗಂಗಾವತಿ ವಿಧಾನಸಭಾ ಕ್ಷೇತ್ರದ ಗ್ರಾಮೀಣ ಶೈಕ್ಷಣಿಕ ಕಾಳಜಿಯಿಂದ ಇಂದರಗಿ ಗ್ರಾಮಕ್ಕೆ ಸರಕಾರಿ ಪದವಿ ಪೂರ್ವ ಕಾಲೇಜು ಮಂಜೂರು ಮಾಡಿಸಿದ್ದು ಕಾಲೇಜ್ ಕಟ್ಟಡಕ್ಕಾಗಿ ಹೈದರಾಬಾದ್ ಕರ್ನಾಟಕ ಪ್ರದೇಶಾಭಿವೃದ್ದಿ ಮಂಡಳಿಗೆ 1 ಕೋಟಿ 34 ಲಕ್ಷ ರೂ.ಗಳ ಪ್ರಸ್ತಾವನೆ ಸಲ್ಲಿಸಲಾಗಿದ್ದು ಶೀಘ್ರ ಹಣ ಮಂಜೂರು ಆಗಲಿದೆ. ಮುಖ್ಯಮಂತ್ರಿಗಳ ಉಚಿತ ಅನಿಲ ಭಾಗ್ಯ ಯೋಜನೆಗೆ ಮೊದಲ ಹಂತದಲ್ಲಿ ಇಂದರಗಿ ಗ್ರಾಮದಲ್ಲಿ 260 ಫಲಾನುಭವಿಗಳನ್ನು ಆಯ್ಕೆ ಮಾಡಲಾಗಿದೆ ಎಂದರು. ನಂತರ ಶಾಸಕರು ಗೋಸಲದೊಡ್ಡಿಯಲ್ಲಿ 76…

Read More