ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣಾಧಿಕಾರಿ ಹಾಗೂ ಸಹಾಯಕ ಚುನಾವಣಾಧಿಕಾರಿಗಳ ನೇಮಕ

ಕೊಪ್ಪಳ ಮಾ.   ಕೊಪ್ಪಳ ಜಿಲ್ಲೆಯ ೬೦-ಕುಷ್ಟಗಿ, ೬೧-ಕನಕಗಿರಿ, ೬೨-ಗಂಗಾವತಿ, ೬೩-ಯಲಬುರ್ಗಾ ಹಾಗೂ ೬೪-ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣಾಧಿಕಾರಿ ಹಾಗೂ ಸಹಾಯಕ ಚುನಾವಣಾಧಿಕಾರಿಗಳನ್ನು ನೇಮಿಸಿ ಜಿಲ್ಲಾ ಚುನಾವಣಾಧಿಕಾರಿಯಾಗಿರುವ ಜಿಲ್ಲಾಧಿಕಾರಿ ಎಂ. ಕನಗವಲ್ಲಿ ಅವರು ಆದೇಶ ಹೊರಡಿಸಿದ್ದಾರೆ. ಕುಷ್ಟಗಿ ವಿಧಾನಸಭಾ ಕ್ಷೇತ್ರಕ್ಕೆ ಕೊಪ್ಪಳ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿನಿರ್ದೇಶಕ ಪ್ರಶಾಂತ್ ಪಿ.ಬಿ.- ೯೪೮೦೭೮೯೦೭೭ ಅವರು ಚುನಾವಣಾಧಿಕಾರಿಯಾಗಿದ್ದು, ಕುಷ್ಟಗಿ ತಹಸಿಲ್ದಾರ್ ಎಚ್. ವಿಶ್ವನಾಥ್-೯೪೮೩೬೬೯೩೬೬ ಅವರನ್ನು ಸಹಾಯಕ ಚುನಾವಣಾಧಿಕಾರಿಯಾಗಿ ನೇಮಿಸಲಾಗಿದೆ. ಕನಕಗಿರಿ ವಿಧಾನಸಭಾ ಕ್ಷೇತ್ರಕ್ಕೆ ಕೊಪ್ಪಳ ಜಿಲ್ಲಾ ಪಂಚಾಯತಿ ಉಪಕಾರ್ಯದರ್ಶಿ ಎಚ್.ವಿ. ನಾಗರಾಜ್- ೯೪೪೮೬೫೨೭೪೮ ಅವರು ಚುನಾವಣಾಧಿಕಾರಿಯಾಗಿದ್ದು, ಕಾರಟಗಿಯ ವಿಶೇಷ ತಹಸಿಲ್ದಾರ್ ವಿಜಯಕುಮಾರ್-೯೯೮೦೨೬೫೮೩೦ ಅವರನ್ನು ಸಹಾಯಕ ಚುನಾವಣಾಧಿಕಾರಿಯಾಗಿ ನೇಮಿಸಲಾಗಿದೆ. ಗಂಗಾವತಿ ವಿಧಾನಸಭಾ ಕ್ಷೇತ್ರಕ್ಕೆ ಕೊಪ್ಪಳ ಉಪವಿಭಾಗಾಧಿಕಾರಿ ರವಿ ತಿರ್ಲಾಪುರ-೯೯೪೫೨೨೮೨೫೦ ಅವರು ಚುನಾವಣಾಧಿಕಾರಿಯಾಗಿದ್ದು, ಗಂಗಾವತಿ ತಹಸಿಲ್ದಾರ್ ರವಿ ಅಂಗಡಿ- ೯೪೪೯೨೯೪೪೧೦ ಅವರು ಸಹಾಯಕ ಚುನಾವಣಾಧಿಕಾರಿಯಾಗಿದ್ದಾರೆ. ಯಲಬುರ್ಗಾ ವಿಧಾನಸಭಾ ಕ್ಷೇತ್ರಕ್ಕೆ ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ…

Read More