ಏ. ೧೮, ೧೯ ರಂದು ಕೊಪ್ಪಳದಲ್ಲಿ ಸಾಮಾನ್ಯ ಪ್ರವೇಶ ಪರೀಕ್ಷೆ : ನಿಷೇದಾಜ್ಞೆ ಜಾರಿ

ಕೊಪ್ಪಳದಲ್ಲಿ ಏ. ೧೮ ಮತ್ತು ೧೯ ರಂದು ಸಾಮಾನ್ಯ ಪ್ರವೇಶ ಪರೀಕ್ಷೆ ನಡೆಯಲಿದ್ದು, ಪರೀಕ್ಷಾ ಕೇಂದ್ರಗಳ ಸುತ್ತಲೂ ೨೦೦ ಮೀಟರ್ ವ್ಯಾಪ್ತಿಯಲ್ಲಿ ನಿಷೇದಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಎಂ. ಕನಗವಲ್ಲಿ ಅವರು ಆದೇಶ ಹೊರಡಿಸಿದ್ದಾರೆ. ಸಾಮಾನ್ಯ ಪ್ರವೇಶ ಪರೀಕ್ಷೇಗಳು ಕೊಪ್ಪಳ ನಗರದ ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು, ಲಯನ್ಸ್ ಸ್ವಾಮಿ ವಿವೇಕಾನಂದ ಸಂಯುಕ್ತ ಪ.ಪೂ ಕಾಲೇಜು, ಗವಿಸಿದ್ದೇಶ್ವರ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಪ.ಪೂ ಕಾಲೇಜು, ಸರಕಾರಿ ಬಾಲಕರ ಪ.ಪೂ ಕಾಲೇಜು, ಬಸಮ್ಮ ಕಾತರಕಿ ವಿಜ್ಞಾನ, ಕಲಾ, ವಾಣಿಜ್ಯ ಪ.ಪೂ ಕಾಲೇಜು, ನವಚೇತನ ಪಿ.ಯು ಸೈನ್ಸ್ ರೆಸಿಡೆನ್ಶಿಯಲ್ ಕಾಲೇಜ್ ಭಾಗ್ಯನಗರ, ಸೇರಿ ಒಟ್ಟು ೬ ಪರೀಕ್ಷಾ ಕೇಂದ್ರಗಳಲ್ಲಿ ಏ. ೧೮ ಮತ್ತು ೧೯ ರಂದು ಬೆಳಿಗ್ಗೆ ೧೦ ರಿಂದ ಮಧ್ಯಾಹ್ನ ೪ ಗಂಟೆಯವರೆಗೆ ಜರುಗಲಿದ್ದು, ಪರೀಕ್ಷೆ ಸುಗಮ ಹಾಗೂ ಶಾಂತಿಯುತವಾಗಿ ನಡೆಯುವ ಉದ್ದೇಶದಿಂದ ಪರೀಕ್ಷಾ ಕೇಂದ್ರಗಳ ಸುತ್ತಲೂ…

Read More