You are here
Home > 2018 > April > 28

ಚುನಾವಣಾ ಪ್ರಚಾರದಲ್ಲಿ ಮಕ್ಕಳನ್ನು ಬಳಸಿಕೊಳ್ಳದಂತೆ ಸೂಚನೆ

ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಅಪ್ರಾಪ್ತ ಮಕ್ಕಳನ್ನು ಚುನಾವಣಾ ಪ್ರಚಾರಕ್ಕಾಗಿ ಬಳಸಿಕೊಳ್ಳುವಂತಿಲ್ಲ ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು ಸೂಚನೆ ನೀಡಿದೆ. ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು ಸಕ್ಷನ್ ೧೩ರ ಅನ್ವಯ ದೂರುಗಳನ್ನು ವಿಚಾರಣೆಗೊಳಪಡಿಸುವ ಮತ್ತು ಸೆಕ್ಷನ್ ೧೪ರ ಅಡಿಯಲ್ಲಿ ಮಕ್ಕಳ ಹಕ್ಕುಗಳ ಉಲ್ಲಂಘನೆಯ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿವಿಲ್ ನ್ಯಾಯಾಲಯದಂತೆ ಕಾರ್ಯನಿರ್ವಹಿಸುವ ಅಧಿಕಾರವನ್ನು ಹೊಂದಿದೆ. ಮಕ್ಕಳ ಹಕ್ಕುಗಳ ಉಲ್ಲಂಘನೆಯಾದ ಪ್ರಕರಣಗಳನ್ನು ಆಯೋಗವು ಸ್ವಯಂಪ್ರೇರಣೆಯಿಂದ (ಸುಮೋಟೋ) ದೂರು

Top