ಈ ದಾಖಲೆಗಳಿದ್ದಲ್ಲಿ ಮತ ಚಲಾಯಿಸಬಹುದು

ಕೊಪ್ಪಳ ಮೇ.: ವಿಧಾನಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಭಾವಚಿತ್ರವಿರುವ ಮತದಾರರ ಗುರುತಿನ ಚೀಟಿ ಇಲ್ಲದೇ ಇರುವವರು, ತಮ್ಮ ಗುರುತು ಸಾಬೀತಿಗೆ ಚುನಾವಣಾ ಆಯೋಗ ಪರ್ಯಾಯವಾಗಿ 12 ದಾಖಲೆಗಳನ್ನು ಸೂಚಿಸಿದ್ದು, ಈ 12 ದಾಖಲೆಗಳಲ್ಲಿ ಯಾವುದಾದರೂ ಒಂದು ದಾಖಲೆ ಇದ್ದರೆ ಸಾಕು, ಮತದಾರರು ತಮ್ಮ ಮತ ಚಲಾಯಿಸಬಹುದಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಎಂ. ಕನಗವಲ್ಲಿ ಅವರು ತಿಳಿಸಿದ್ದಾರೆ. ವಿಧಾನಸಭೆ ಚುನಾವಣೆಗೆ ಮೇ. 12 ರಂದು ಬೆಳಿಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಮತದಾನ ಮಾಡಲು ಅವಧಿ ನಿಗದಿಪಡಿಸಲಾಗಿದ್ದು, ಮತದಾರರು ತಮ್ಮ ಹಕ್ಕು ಚಲಾಯಿಸಲು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಕಡ್ಡಾಯವಾಗಿ ಇರಬೇಕು. ಮತದಾರರ ಭಾವಚಿತ್ರವಿರುವ ಗುರುತಿನ ಚೀಟಿ ಹೊಂದಿರಬೇಕು. ಮತದಾರರ ಭಾವಚಿತ್ರವಿರುವ ಗುರುತಿನ ಚೀಟಿಯನ್ನು ಹಾಜರುಪಡಿಸಲು ಸಾಧ್ಯವಾಗದೇ ಇದ್ದಲ್ಲಿ, ಮತದಾರರು ತಮ್ಮ ಮತ ಚಲಾಯಿಸಲು, ಚುನಾವಣಾ ಆಯೋಗ ಪರ್ಯಾಯವಾಗಿ 12 ಬಗೆಯ ದಾಖಲೆಗಳನ್ನು ನಿಗದಿಪಡಿಸಿದೆ. ಈ 12 ದಾಖಲೆಗಳ…

Read More