ಮತದಾನ ಪ್ರಜಾ ಪ್ರಭುತ್ವದ ಹಬ್ಬದ ಸಂಭ್ರಮದಂತಾಗಲಿ

ಸ್ವೀಪ್ ಪರಿಣಾಮ : ಮತದಾನ ಪ್ರಮಾಣದಲ್ಲಿ ಹೆಚ್ಚಳದ ನಿರೀಕ್ಷೆ- ವೆಂಕಟ್ ರಾಜಾ *************************** ಕೊಪ್ಪಳ ಮೇ.: ಮತದಾನದ ಮಹತ್ವ ಕುರಿತು ಮತದಾರರಲ್ಲಿ ಜಾಗೃತಿ ಮೂಡಿಸಲು ಚುನಾವಣಾ ಆಯೋಗ ಜಾರಿಗೆ ತಂದ ಸ್ವೀಪ್ ಕಾರ್ಯಕ್ರಮದ ಪರಿಣಾಮವಾಗಿ ಕೊಪ್ಪಳ ಜಿಲ್ಲೆಯಲ್ಲಿ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಹೆಚ್ಚಿನ ಮತದಾನ ಪ್ರಮಾಣವನ್ನು ನಿರೀಕ್ಷಿಸಲಾಗಿದೆ ಎಂದು ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷರಾಗಿರುವ ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವೆಂಕಟ್ ರಾಜಾ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಸುಶಿಕ್ಷಿತ ಮತದಾರರೇ ತಮ್ಮ ಪವಿತ್ರ ಕರ್ತವ್ಯದಿಂದ ವಿಮುಖರಾಗುತ್ತಿರುವ ಪರಿಣಾಮವಾಗಿ ದೇಶದ ಅನೇಕ ಕಡೆಗಳಲ್ಲಿ ಕನಿಷ್ಟ ಪ್ರಮಾಣದ ಮತದಾನ ದಾಖಲಾಗಿರುವುದು ಆತಂಕಕಾರಿ ಸಂಗತಿಯಾಗಿದೆ. ಜನಹಿತ ಕಲ್ಯಾಣಕ್ಕಾಗಿ ಅನೇಕ ಯೋಜನೆಗಳನ್ನು ರೂಪಿಸುವಂತಹ ಜವಾಬ್ದಾರಿಯನ್ನು ಜನರಿಂದ ಆಯ್ಕೆಯಾಗುವ ಜನಪ್ರತಿನಿಧಿಗಳಿಗೆ ವಹಿಸಿಕೊಡಲಾಗಿದ್ದು, ಇಂತಹ ಜನಪ್ರತಿನಿಧಿಗಳು ಈ ನಾಡಿನ ಎಲ್ಲ ಮತದಾರರ ಪ್ರತಿನಿಧಿಯಾಗಿರುತ್ತಾರೆ. ಇಂತಹ ಜನಪ್ರತಿನಿಧಿಯನ್ನು ಶೇ. 100 ರಷ್ಟು ಮತದಾರರೇ ಆಯ್ಕೆ ಮಾಡಿದಲ್ಲಿ,…

Read More