ಮೇ. 15 ರಂದು ಮತ ಎಣಿಕೆಗೆ ಕೊಪ್ಪಳ ಜಿಲ್ಲಾಡಳಿತ ಸಜ್ಜು

ಪ್ರಸಕ್ತ ವಿಧಾನಸಭೆ ಚುನಾವಣೆಯ ಮತದಾನ ಪ್ರಕ್ರಿಯೆ ಕೊಪ್ಪಳ ಜಿಲ್ಲೆಯಲ್ಲಿ ಬಹುತೇಕ ಶಾಂತಿಯುತವಾಗಿ ಪೂರ್ಣಗೊಂಡಿದ್ದು, ಜಿಲ್ಲೆಯ ಐದೂ ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ಕಾರ್ಯ ಮೇ. 15 ರಂದು ಬೆಳಿಗ್ಗೆ 07 ಗಂಟೆಯಿಂದ ನಗರದ ಶ್ರೀ ಗವಿಸಿದ್ದೇಶ್ವರ ಮಹಾ ವಿದ್ಯಾಲಯದಲ್ಲಿ ನಡೆಯಲಿದೆ. ಶನಿವಾರದಂದು ವಿಧಾನಸಭಾ ಕ್ಷೇತ್ರಗಳಿಗೆ ಮತದಾನ ಜರುಗಿದ್ದು, ಅಭ್ಯರ್ಥಿಗಳ ಭವಿಷ್ಯ ಮತ ಯಂತ್ರಗಳಲ್ಲಿ ಭದ್ರವಾಗಿದೆ. ಮೇ. 15 ರಂದು ಮಧ್ಯಾಹ್ನ 12 ಗಂಟೆಯ ವೇಳೆಗೆ ಎಲ್ಲ ಅಭ್ಯರ್ಥಿಗಳ ಸೋಲು-ಗೆಲುವಿನ ಲೆಕ್ಕಾಚಾರಕ್ಕೆ ತೆರೆ ಬೀಳುವ ಸಾಧ್ಯತೆಗಳಿವೆ. ಮತದಾನ ದಾಖಲಾಗಿರುವ ಮತ ಯಂತ್ರಗಳನ್ನು ಬಿಗಿ ಪೊಲೀಸ್ ಬಂದೋಬಸ್ತ್‍ನಲ್ಲಿ ಗವಿಸಿದ್ದೇಶ್ವರ ಮಹಾ ವಿದ್ಯಾಲಯದ ದಾಸ್ತಾನು ಕೊಠಡಿಗಳಲ್ಲಿ ಇರಿಸಲಾಗಿದೆ. ಮತ ಎಣಿಕೆ ಕಾರ್ಯವನ್ನು ಸುಗಮವಾಗಿ ಕೈಗೊಳ್ಳಲು ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ತಲಾ 14 ಟೇಬಲ್‍ಗಳನ್ನು ವ್ಯವಸ್ಥಿತಗೊಳಿಸಲಾಗಿದ್ದು, 17 ಮತ ಎಣಿಕಾ ಮೇಲ್ವಿಚಾರಕರು, 17 ಎಣಿಕಾ ಸಹಾಯಕರು, 17 ಸ್ಟ್ಯಾಟಿಕ್ ಅಬ್ಸರ್ವರ್ಸ್ ಗಳನ್ನು ನಿಯೋಜಿಸಲಾಗಿದೆ.…

Read More