ಗಾಂಧೀಜಿಯವರ ಹೆಜ್ಜೆಯ ಗುರುತು ಪ್ರತಿಯೊಬ್ಬರ ಜೀವನದಲ್ಲಿರಲಿ- ಸಿ.ಡಿ.ಗೀತಾ

ಕೊಪ್ಪಳ.ಅ.02- : ದಂಡಿ ಉಪ್ಪಿನಸತ್ಯಾಗ್ರಹ, ಕ್ವಿಟ್ ಇಂಡಿಯಾ ಚಳುವಳಿಯಂತಹ ಅನೇಕ ಹೋರಾಟಗಳ ಮೂಲಕ ದೇಶಕ್ಕೆ ಸ್ವಾತಂತ್ರ್ಯವನ್ನು ತಂದುಕೊಟ್ಟ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜೀವನ ಚರಿತ್ರೆ ತಿಳಿದುಕೊಂಡು ಅವರ ಪ್ರತಿ ಹೆಜ್ಜೆಯ ಗುರುತನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂದು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಅಪರ ಜಿಲ್ಲಾಧಿಕಾರಿ ಸಿ.ಡಿ.ಗೀತಾ ತಿಳಿಸಿದರು. ಅವರು (ಅ.2) ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಕನ್ನಡ ಮತ್ತು ಸಂಸ್ಕøತಿ ಇಲಾಖೆಯಿಂದ ಜಿಲ್ಲಾ ಆಡಳಿತ ಭವನದ ಆಡಿಟೋರಿಯಂನಲ್ಲಿ ಗಾಂಧೀಜಿಯವರ 150 ನೇ ಜನ್ಮ ವರ್ಷಾಚರಣೆ ಅಂಗವಾಗಿ ಏರ್ಪಡಿಸಲಾದ ಗಾಂಧಿ ಜಯಂತಿ, ಗಾಂಧೀಜಿಯವರ ಛಾಯಾಚಿತ್ರ ಪ್ರದರ್ಶನ, ಸಾಕ್ಷ್ಯಚಿತ್ರ ಪ್ರದರ್ಶನ ಹಾಗೂ ಸರ್ವಧರ್ಮ ಪ್ರಾರ್ಥನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಗಾಂಧೀಜಿ ಹಾಗೂ ಮಾಜಿ ಪ್ರಧಾನಿ ಲಾಲ್‍ಬಹದ್ದೂರ್ ಶಾಸ್ತ್ರಿಯವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದರು. ಗಾಂಧೀಜಿಯವರು ತಮ್ಮ ಬಾಲ್ಯದಲ್ಲಿ ಮಾಡಿದ ಅಪರಾಧದ ಅರಿವಾಗಿದ್ದರಿಂದ ಮುಂದೆ ಗಾಂಧೀಜಿಯು ಸತ್ಯ,…

Read More