ಜಿಲ್ಲೆಯ ಭೂಮಿ ಮತ್ತು ವಸತಿ ಸಮಸ್ಯೆಗಳನ್ನು ಬಗೆಹರಿಸಲು ತುರ್ತುಕ್ರಮ ಕೈಗೊಳ್ಳಲು ಒತ್ತಾಯ

ಜಿಲ್ಲೆಯ ಭೂಮಿ ಮತ್ತು ವಸತಿ ಸಮಸ್ಯೆಗಳನ್ನು ಬಗೆಹರಿಸಲು sಸರ್ಕಾರಿ ಆದೇಶಗಳ ಮತ್ತು ಉನ್ನತ ಮಟ್ಟದ ಸಮಿತಿ ತೀರ್ಮಾನಗಳ ಜಾರಿಗಾಗಿ ಹಾಗೂ ಸಮಸ್ಯೆಗಳನ್ನು ಬಗೆಹರಿಸಲು ತುರ್ತುಕ್ರಮ ಕೈಗೊಳ್ಳಲು ಒತ್ತಾಯಿಸಿ. ರಾಜ್ಯದ ಬಡ ಜನರ ಭೂಮಿ ಮತ್ತು ವಸತಿ ಸಮಸ್ಯೆಗಳನ್ನು ಬಗೆಹರಿಸಲು ಕಳೆದ ಎರಡೂವರೆ ವರ್ಷಗಳಿಂದ ವಿವಿಧ ಸಂಘಟನೆಗಳು ಮೇಲ್ಕಂಡ ವೇದಿಕೆಯಡಿ ಒಟ್ಟುಗೂಡಿ ಸ್ವಾತಂತ್ರ್ಯ ಸೇನಾನಿ ಎಚ್.ಎಸ್.ದೊರೆಸ್ವಾಮಿಯವರ ನೇತೃತ್ವದಲ್ಲಿ ಹೋರಾಟಗಳನ್ನು ನಡೆಸುತ್ತಾ ಬರಲಾಗುತ್ತಿದೆ. ರಾಜ್ಯ ಸರ್ಕಾರ ಭೂಮಿ ವಸತಿ ಸಮಸ್ಯೆಗಳ ಬಗ್ಗೆ ತೆಗೆದುಕೊಂಡಿರುವ ಕ್ರಮಗಳ ಕುರಿತು ಪರಿಶೀಲಿಸಲು ಮೇಲುಸ್ತುವಾರಿಗಾಗಿ ಉನ್ನತ ಮಟ್ಟದ ಸಮಿತಿಯನ್ನು ರಚಿಸಿದ್ದು, ಬಡ ಜನತೆಯ ಸಮಸ್ಯೆಗಳನ್ನು ಬಗೆಹರಿಸಲು ಉನ್ನತ ಮಟ್ಟದ ಸಮಿತಿಯಲ್ಲಿ ಗಂಭೀರವಾದ ಪ್ರಯತ್ನಗಳನ್ನು ಮಾಡುತ್ತಿರುವುದು ಸರಿಯಷ್ಟೆ. ಅದೇ ರೀತಿ ಆಯಾ ಜಿಲ್ಲೆಗಳಲ್ಲಿ ಒಂದಷ್ಟು ಬಡವರಿಗೆ ಭೂಮಿ-ನಿವೇಶನ-ಮನೆಗಳೂ ದೊರೆತಿವೆ. ಇದಕ್ಕಾಗಿ ಶ್ರಮಿಸಿದವರೆಲ್ಲರಿಗೂ ಹೋರಾಟ ಸಮಿತಿಯು ಅಭಿನಂದನೆಗಳನ್ನು ಸಲ್ಲಿಸುತ್ತದೆ. ಅದೇ ರೀತಿ ಹತ್ತಾರು ವರ್ಷಗಳಿಂದ ಬಗೆಹರಿಯದೆ ಉಳಿದಿರುವ ನೂರಾರು…

Read More