ಶಂಕರ ಮಳಗಿ ಸೇರಿ ಲಂಚ ಪಡೆಯುತ್ತಿದ್ದ ಮೂವರ ಮೇಲೆ ಎಸಿಬಿ ದಾಳಿ : ಬಂಧನ

ಕೊಪ್ಪಳ: ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಶಂಕರ ಮಳಗಿ ಸೇರಿ ಲಂಚ ಪಡೆಯುತ್ತಿದ್ದ ಮೂವರ ಮೇಲೆ ಎಸಿಬಿ ಪೊಲೀಸರು ದಾಳಿ ನಡೆಸಿ, ಹಣ ವಶಪಡಿಸಿಕೊಂಡ ಘಟನೆ ನಡೆದಿದೆ. ಇಲಾಖೆ ವತಿಯಿಂದ ಕೊಪ್ಪಳ ತಾಲ್ಲೂಕಿನ ಕಲಕೇರಿ ಗ್ರಾಮ ಪಂಚಾಯ್ತಿಯಲ್ಲಿ ₹ 40 ಲಕ್ಷದ ವೆಚ್ಚದಲ್ಲಿ ಕಾಮಗಾರಿ ಕ್ರಿಯಾ ಯೋಜನೆಗೆ ಒಪ್ಪಿಗೆ ಸೂಚಿಸಲು ಶಿವಪ್ಪ ಚರಾರಿ ಅವರಿಂದ ₹ 10 ಸಾವಿರ ಲಂಚ ಪಡೆಯುತ್ತಿದ್ದ ವೇಳೆ ಜಿಲ್ಲಾ ಭ್ರಷ್ಟಾಚಾರ ನಿಗ್ರಹ ದಳದ ಡಿವೈಎಸ್‌ಪಿ ರುದ್ರೇಶ ಉಜ್ಜನಕೊಪ್ಪ ನೇತೃತ್ವದಲ್ಲಿ ದಾಳಿ ನಡೆಸಿ ಪ್ರಕರಣ ದಾಖಲಿಸಿದ್ದಾರೆ. ಲಂಚಕ್ಕೆ ಬೇಡಿಕೆಯಿಟ್ಟಿದ್ದ ಕಚೇರಿಯ ಎಕ್ಸಿಕ್ಯೂಟಿವ್ ಎಂಜಿನಿಯರ್ ಶಿಲ್ಪಾ ಮುಂದಲಮನಿ, ಕಂಪ್ಯೂಟರ್ ಆಪರೇಟರ್ ಸತೀಶಕುಮಾರ ಗಿರಿ ಅವರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ಎಸಿಬಿ ಪೊಲೀಸರು ಮೂವರನ್ನು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ.

Read More