ಎಸ್‌ಎಸ್‌ಎಲ್‌ಸಿ ಫಲಿತಾಂಶ ಸುಧಾರಿಸುವ ನಿಟ್ಟಿನಲ್ಲಿ ಶಿಕ್ಷಕರ ಪಾತ್ರ ಮುಖ್ಯ- ಗೂಳಪ್ಪ ಹಲಗೇರಿ

ಕೊಪ್ಪಳ ತಾಲೂಕಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮ  ಕೊಪ್ಪಳ : ನಮ್ಮ ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ಪ್ರತಿಭಾವಂತ ಮಕ್ಕಳು ಸಾಕಷ್ಟು ಇದ್ದಾರೆ. ಅವರಿಗೆ ಸರಿಯಾದ ಮಾರ್ಗದರ್ಶನ ಮತ್ತು ಸ್ಪೂರ್ತಿ ಅಗತ್ಯ. ಅಲ್ಲದೇ ಸೂಕ್ತ ವೇದಿಕೆಗಳನ್ನು ಕಲ್ಪಿಸಿಕೊಡುವುದರಿಂದ ಅವರ ಪ್ರತಿಭೆ ಹೊರಹೊಮ್ಮುತ್ತದೆ. ಹಾಗಾಗಿ ಪ್ರತಿಭೆಯನ್ನು ಗುರುತಿಸಲು ಸರಕಾರ ಪ್ರತಿಭಾ ಕಾರಂಜಿ ವೇದಿಕೆಗಳನ್ನು ಸೃಷ್ಟಿಸಿದ್ದು ಇಲ್ಲಿ ವಿದ್ಯಾರ್ಥಿಗಳು ತಮ್ಮ ಪ್ರತಿಭೆಯನ್ನು ಪ್ರದರ್ಶಿಸಬಹುದು ಎಂದು ಜಿಲ್ಲಾ ಪಂಚಾಯತ್ ನ ಶಿಕ್ಷಣ ಸ್ಥಾಯಿ ಸಮಿತಿಯ ಅಧ್ಯಕ್ಷ ಗೂಳಪ್ಪ ಹಗೇರಿ ಹೇಳಿದರು. ಅವರು ಕೊಪ್ಪಳದ ಬಹಾದ್ದೂರ ಬಂಡಿ ರಸ್ತೆಯಲ್ಲಿರುವ ಸರಸ್ವತಿ ವಿದ್ಯಾಮಂದಿರ ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ಜರುಗಿದ ಎರಡು ದಿನಗಳ ಪ್ರತಿಭಾ ಕಾರಂಜಿ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು. ಪ್ರತಿಭೆಗಳನ್ನು ಗುರುತಿಸುವುದು ಮತ್ತು ಅವರಿಗೆ ಸ್ಪೂರ್ತಿ ನೀಡುವ ಕೆಲಸ ಶಿಕ್ಷಕರಿಂದ ಆಗಬೇಕಿದೆ. ಯಾವುದೇ ತಾರತಮ್ಯ ಮಾಡದೇ ಪ್ರತಿಭೆ ಇರುವಂತಹ ಮಕ್ಕಳಿಗೆ ತಕ್ಕಂತೆ ಪ್ರೋತ್ಸಾಹ…

Read More