ಕನಿಷ್ಠ ಬೆಂಬಲ ಬೆಲೆ ಯೋಜನೆ ಅಡಿಯಲ್ಲಿ ಸರಕಾರದಿಂದ ಭತ್ತ ಖರೀದಿ

ಡಿ. ೦೫ ರಿಂದ ರೈತರ ನೊಂದಣಿ ಆರಂಭ : ಪಿ. ಸುನೀಲ್ ಕುಮಾರ್ ಕೊಪ್ಪಳ ಡಿ. ೦೪ : ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಸರ್ಕಾರವು ರೈತರಿಂದ ಭತ್ತವನ್ನು ಖರೀದಿಸುತ್ತಿದ್ದು, ಭತ್ತ ಮಾರಾಟ ಮಾಡಲು ಇಚ್ಚಿಸುವ ರೈತರು ಆನ್‌ಲೈನ್ ಮೂಲಕ ನೊಂದಣಿ ಮಾಡಿಕೊಳ್ಳಬೇಕಾಗಿದ್ದು, ಡಿ. ೦೫ ರಿಂದ ನೊಂದಣಿ ಪ್ರಕ್ರೀಯೆ ಆರಂಭವಾಗಲಿದೆ ಎಂದು ಕೊಪ್ಪಳ ಜಿಲ್ಲಾ ಟಾಸ್ಕ್‌ಪೋರ್ಸ್ ಸಮಿತಿ ಅಧ್ಯಕ್ಷರು ಆಗಿರುವ ಜಿಲ್ಲಾಧಿಕಾರಿ ಪಿ. ಸುನೀಲ್ ಕುಮಾರ ಅವರು ಹೇಳಿದರು. ಪ್ರಸಕ್ತ ಸಾಲಿನ ಕೇಂದ್ರ ಸರ್ಕಾರ ಬೆಂಬಲ ಬೆಲೆ ಘೋಷಿಸಿರುವ ಕುರಿತು ಕೊಪ್ಪಳ ಜಿಲ್ಲೆಯಲ್ಲಿ ಖರೀದಿ ಕೇಂದ್ರಗಳನ್ನು ತೆರೆದು ಭತ್ತ ಖರೀದಿ ಪ್ರಕ್ರೀಯೆಯನ್ನು ಚಾಲನೆಗೊಳಿಸುವ ಕುರಿತು ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರದಂದು ಆಯೋಜಿಸಲಾದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ರೈತರಿಂದ ಭತ್ತವನ್ನು ಖರೀದಿಸುವ ಬಗ್ಗೆ ಸರ್ಕಾರದ ಆದೇಶವು ಗಮನ ಸೆಳೆದಿದ್ದು, ಕೇಂದ್ರ…

Read More